ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ -18 ಮಂದಿ ಸಾವು

Public TV
1 Min Read

ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ಗೆ (Military Helicopter) ಪ್ರಯಾಣಿಕರಿದ್ದ ವಿಮಾನವೊಂದು (Flight) ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport )ಬಳಿ ನಡೆದಿದೆ.

ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ ಬಿದ್ದಿದೆ. ಸದ್ಯ ನದಿಯಿಂದ ವಿಮಾನದಲ್ಲಿದ್ದ ನಾಲ್ವರನ್ನು ರಕ್ಷಣೆ ಮಾಡಿದ್ದು, 18 ಮಂದಿಯ ಮೃತದೇಹಗಳನ್ನು ಮೇಲೆತ್ತಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಪುಡಿ ರೌಡಿಯ ಕಾಟ | ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ

ಅಪಘಾತಕ್ಕೀಡಾದ ವಿಮಾನವು 60 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

Share This Article