ಭಾರತದ ರಾಷ್ಟ್ರಗೀತೆ ಹಾಡಿ ಮೋದಿ ಆಶೀರ್ವಾದ ಪಡೆದ ಅಮೆರಿಕ ಗಾಯಕಿ

Public TV
1 Min Read

ನವದೆಹಲಿ: ಪ್ರಸಿದ್ಧ ಗಾಯಕಿ ಮೇರಿ ಮಿಲ್ಬೆನ್ (Mary Millben) ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಕಾಲ್ಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ (America) ನೆಲೆಸಿರುವ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಆಫ್ರಿಕನ್ ಹಾಗೂ ಅಮೆರಿಕನ್ ಹಾಲಿವುಡ್ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ ಕಾರ್ಯಕ್ರಮ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಗೀತೆಯನ್ನು (National Anthem) ಸಹ ಅವರು ಹಾಡಿದರು. ಬಳಿಕ ಪ್ರಧಾನಿಯವರಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಇದನ್ನೂ ಓದಿ: ಕನಿಮೊಳಿಗೆ ಟಿಕೆಟ್ – ಕೆಲಸ ತೊರೆದ ತಮಿಳುನಾಡಿನ ಮೊದಲ ಬಸ್ ಚಾಲಕಿ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಒಬ್ಬ ಕರುಣೆ ಉಳ್ಳಂತಹ ವ್ಯಕ್ತಿ. ನಾನು ಅವರೊಂದಿಗೆ ಇಲ್ಲಿರುವುದು ನನಗೆ ತುಂಬಾ ಹೆಮ್ಮೆಯಾಗಿದೆ. ಇಷ್ಟೊಂದು ಜನರ ನಡುವೆ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವುದು ನನಗೆ ಖುಷಿ ನೀಡಿದೆ ಎಂದಿದ್ದಾರೆ.

ಇದಕ್ಕೂ ಮೊದಲು ಗಾಯಕಿಯನ್ನು ಭಾರತದ 75 ನೇ ಸ್ವಾತಂತ್ರೋತ್ಸವದಲ್ಲಿ ಕಾರ್ಯಕ್ರಮ ಆಹ್ವಾನಿಸಲಾಗಿತ್ತು. ಈ ವೇಳೆ ಭಾರತಕ್ಕೆ ಭೇಟಿಕೊಟ್ಟಿದ್ದ ಅವರು ರಾಷ್ಟ್ರಗೀತೆಯನ್ನು ಹಾಡಿದ್ದರು. ಇದನ್ನೂ ಓದಿ: ಪಾವಗಡ ಪೊಲೀಸ್ ಠಾಣೆಗೆ ಗೃಹ ಸಚಿವ ದಿಢೀರ್ ಭೇಟಿ

Share This Article