ಅಮಿತ್ ಶಾ ಓರ್ವ ಗೂಂಡಾ, ರೌಡಿ ಗುಜರಾತ್‍ನಲ್ಲಿ ನರಮೇಧ ಮಾಡಿದ್ರು: ಯತೀಂದ್ರ ಸಿದ್ದರಾಮಯ್ಯ

Public TV
1 Min Read

ಚಾಮರಾಜನಗರ: ಅಮಿತ್ ಶಾ (Amit Shah) ಓರ್ವ ಗೂಂಡಾ, ರೌಡಿ ಎಂದು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹನೂರು ಕಾಂಗ್ರೆಸ್ (Congress) ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಗುಜರಾತ್‍ನಲ್ಲಿ ನರಮೇಧ ಮಾಡಿದವರು ಯಾರು? ಇಂತಹವರು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಕ್ರಿಮಿನಲ್ ಚಟುವಟಿಕೆಯುಳ್ಳ ಇಂತಹವರನ್ನು ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್: ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು, ಅದು ಆಗಲಿಲ್ಲ. ಈಗ ನಿರೋದ್ಯೋಗಿಗಳಿಗೆ ಉದ್ಯೋಗ ಸೃಷ್ಟಿ ಮಾಡೋದು ಕೇಂದ್ರ ಸರ್ಕಾರದ ಹೊಣೆ ಅಲ್ಲ ಎಂದು ಹೇಳ್ತಿದ್ದಾರೆ. ಕಪ್ಪು ಹಣ ವಾಪಸ್ ತರುತ್ತೇವೆ ಎಂದಿದ್ದರು, ತಂದ್ರಾ? ಸ್ವಿಸ್ ಬ್ಯಾಂಕ್‍ನಲ್ಲಿ ಯಾರ ಖಾತೆಯಿದೆ ಎಂದು ಪಟ್ಟಿ ಕೂಡ ರಿಲೀಸ್ ಮಾಡಲಿಲ್ಲ. ಪೆಟ್ರೋಲ್ ಡೀಸೆಲ್ ರೇಟ್ ಹೆಚ್ಚಾಗಿ ಹೋಗಿದೆ ಎಂದಿದ್ದಾರೆ.

400ಕ್ಕೂ ಹೆಚ್ಚು ಸ್ಥಾನ ಗೆಲ್ತೀವಿ, 400ಕ್ಕೂ ಹೆಚ್ಚು ಸ್ಥಾನ ಬಂದ್ರೆ ಸಂವಿಧಾನ ಬದಲಾವಣೆ ಮಾಡುವುದು ಇವರ ಹಿಡನ್ ಅಜೆಂಡಾ ಆಗಿದೆ. ದೇಶದ ಇತಿಹಾಸದಲ್ಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಸರ್ಕಾರ ಎಂದರೆ ಅದು ಮೋದಿ ಸರ್ಕಾರ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲೂ ಉಗ್ರರ ಜಾಲ – ರಾಮೇಶ್ವರಂ ಕೆಫೆ ಸ್ಫೋಟ, ಓರ್ವ ಅರೆಸ್ಟ್‌

Share This Article