ಸರ್ಕಾರ ನಿರ್ಧಾರ ತಪ್ಪಿರಬಹುದು, ಉದ್ದೇಶವಲ್ಲ: ಅಮಿತ್‌ ಶಾ

Public TV
1 Min Read

ನವದೆಹಲಿ: ನಮ್ಮ ಸರ್ಕಾರ ಕೆಲವು ತಪ್ಪು ನಿರ್ಧಾರ ಕೈಗೊಂಡಿರಬಹುದು, ಆದರೆ ನಮ್ಮ ಉದ್ದೇಶ ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ(ಎಫ್‍ಐಸಿಸಿಐ) 94 ನೇ ವಾರ್ಷಿಕ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 7 ವಷಗಳ ಕಾಲ ಮೋದಿ ಆಡಳಿತಾವಧಿಯಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಸಾಧಿಸಿದೆ. ಕಳೆದ ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳಿಲ್ಲ, ಏಕೆಂದರೆ ಸರ್ಕಾರದ ಉದ್ದೇಶ ಯಾವಾಗಲೂ ಸರಿಯಾಗಿದೆ. ದೇಶವು ಸಾಕಷ್ಟು ಬದಲಾವಣೆಗಳನ್ನು ಕಂಡಿದೆ ಎಂದು ವಿಮರ್ಶಕರು ಸಹ ಒಪ್ಪಿಕೊಳ್ಳುತ್ತಾರೆ. ಅವರ ಆಡಳಿತದಲ್ಲಿ ಯಾವುದೇ ಭ್ರಷ್ಟಾಚಾರ ಆರೋಪ ಕೇಳಿ ಬಂದಿಲ್ಲ ಎಂದಿದ್ದಾರೆ.

ಉತ್ತರಪ್ರದೇಶ ಸರ್ಕಾರದ ಆಡಳಿತದಿಂದಾಗಿ ಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಕಳೆದುಕೊಳ್ಳುವ ಹಂತ ತಲುಪಿದ್ದರು. ಆದರೆ ಈ ಸಮಯದಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿಯವರು ಬಹುಪಕ್ಷಗಳ ಪ್ರಜಾಪ್ರಭುತ್ವದ ಬಗ್ಗೆ ಜನರು ಕಳೆದುಕೊಂಡ ನಂಬಿಕೆಯನ್ನು ಪುನರ್‌ಸ್ಥಾಪಿಸಿದರು ಎಂದು ಮೋದಿ ಅವರನ್ನು ಅಮಿತ್‌ ಶಾ ಹಾಡಿ ಹೋಗಳಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ಕೋವಿಡ್-19  ಸಮಯದಲ್ಲಿಯೂ ಸರ್ಕಾರವು ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ದೀರ್ಘಕಾಲೀನ ಧನಾತ್ಮಕ ಪರಿಣಾಮ ಬೀರುವ ಹಲವಾರು ನೀತಿ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಕ್ರಾಂತಿಯ ಅವಶ್ಯಕತೆ ಇಲ್ಲ, ಬದಲಾಗಿ ವಿಕಾಸದ ಅಗತ್ಯವಿದೆ: ಮೋದಿ

Share This Article
Leave a Comment

Leave a Reply

Your email address will not be published. Required fields are marked *