ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

Public TV
2 Min Read

ಹೈದರಾಬಾದ್‌: ಭಾರತೀಯ ಜನತಾ ಪಕ್ಷವೂ (BJP) ಮುಸ್ಲಿಂ ಸಮುದಾಯಕ್ಕಿರುವ 4% ಮೀಸಲಾತಿಯನ್ನೂ (Muslim Reservation) ತೆಗೆದುಹಾಕುತ್ತೇವೆ. ಅದನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ಹಾಗೂ ಇತರೇ ಹಿಂದುಳಿದ ವರ್ಗದ ಜನರಿಗೆ ಹಂಚುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

ನವೆಂಬರ್‌ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections) ಹಿನ್ನೆಲೆಯಲ್ಲಿ ಜಗ್ತಿಯಾಲ್‌ನಲ್ಲಿ ಚುನಾವಣಾ ಪ್ರಚಾರಸಭೆ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮುಸ್ಲಿಂ ಸಮುದಾಯಕ್ಕೆ ನೀಡಿರುವ 4% ಮೀಸಲಾತಿಯನ್ನೂ ತೆಗೆದುಹಾಕ್ತೇವೆ, ಎಂದರಲ್ಲದೇ ತೆಲಂಗಾಣದಲ್ಲಿರುವ ಮಾದಿಗ ಸಮುದಾಯಕ್ಕೆ ಎಸ್ಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ – ಪ್ರೀತಿಯ ಅಪ್ಪುಗೆ ನೀಡಿ ಸಾಂತ್ವನ ಹೇಳಿದ ಅನುಷ್ಕಾ

ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಸಾದುದ್ದೀನ್‌ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ. ಆದ್ರೆ ನಾವು ಓವೈಸಿಗೆ ಹೆದರಲ್ಲ. ಮುಂದೆ ತೆಲಂಗಾಣದಲ್ಲಿ ಹೈದರಾಬಾದ್‌ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್‌ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್‌ ಭಾವುಕ

ಅಲ್ಲದೇ ಭಾರತ್ ರಾಷ್ಟ್ರ ಸಮಿತಿ (BRS), ಎಐಎಂಐಎಂ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಈ ಎಲ್ಲಾ ಪಕ್ಷಗಳು 2G, 3G ಮತ್ತು 4G ಪಕ್ಷಗಳು. 2G ಎಂದರೆ ಕೆಸಿಆರ್ ಮತ್ತು ಕೆಟಿಆರ್, 3G ಅಂದ್ರೆ ಓವೈಸಿಯ ಅಜ್ಜ, ಅವರ ತಂದೆ ಮತ್ತು ಓವೈಸಿ, 4G ಅಂದ್ರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ. ಅದರಲ್ಲಿ ನಿಮ್ಮಸ್ಥಾನ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೊಲೀಸರ ಮೇಲಿನ ಐನೂರು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿದ್ದೇನೆ: ಪರಮೇಶ್ವರ್‌

ಇದೇ ವೇಳೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ತಿರಂಗವನ್ನು ಚಂದ್ರನ ಮೇಲೆ ಕೊಂಡೊಯ್ಯುವಂತೆ ಮಾಡಿದ್ದಾರೆ, ಹೊಸ ಸಂಸತ್‌ ಭವನ ಸ್ಥಾಪನೆಗೆ ಕಾರಣರಾಗಿದ್ದಾರೆ. ಜಿ20 ಶೃಂಗಸಭೆ ನೇತೃತ್ವ ವಹಿಸಿದ್ದಾರೆ. ಜೊತೆಗೆ ಭಾರತವನ್ನು ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕೊಂಡೊಯ್ದು  ಸೃದೃಢ ರಾಷ್ಟ್ರವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

Share This Article