ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

Public TV
2 Min Read

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) (Garib Rath Express) ಏಕಾಏಕಿ ಬೆಂಕಿ (fire) ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ (Amritsar) ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ. ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಗೊಂದಲದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸುವಾಗ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

Share This Article