Amul Vs Nandini: ಅಮುಲ್‌ಗೆ KMF ಸೆಡ್ಡು – ಆನ್‌ಲೈನ್‌ನಲ್ಲೂ ನಂದಿನಿ ಉತ್ಪನ್ನ ಸೇಲ್

Public TV
1 Min Read

ಬೆಂಗಳೂರು: ಕೆಎಂಎಫ್ (KMF), ಅಮುಲ್ (Amul) ನಡುವಿನ ಸಮರ ತಣ್ಣಗಾಗುವಂತೆ ಕಾಣುತ್ತಿಲ್ಲ. ವಿರೋಧದ ಮಧ್ಯೆಯೂ ಆನ್‌ಲೈನ್‌ನಲ್ಲಿ (KMF Online Products) ಉತ್ಪನ್ನಗಳ ಮಾರಾಟಕ್ಕೆ ಮುಂದಾದ ಅಮುಲ್‌ಗೆ ಈಗ ಕೆಎಂಫ್ ಸೆಡ್ಡು ಹೊಡೆದಿದೆ.

ಆನ್‌ಲೈನ್‌ನಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ಹೆಚ್ಚಿಸಿದೆ. ಸದ್ಯಕ್ಕೆ ಸರಿಸುಮಾರು 2 ಲಕ್ಷ ಲೀಟರ್ ನಂದಿನಿ ಹಾಲು ಆನ್‌ಲೈನ್ ಮೂಲಕ ಸೇಲ್ ಆಗುತ್ತಿದೆ. ಇದರ ಪ್ರಮಾಣ ಇನ್ನಷ್ಟು ಹೆಚ್ಚಿಸುವ ಗುರಿಯನ್ನು ಕೆಎಂಎಫ್ ಹೊಂದಿದೆ. ಅಪಾರ್ಟ್ಮೆಂಟ್‌ಗಳು ಹಾಗೂ ಹೊರರಾಜ್ಯದವರನ್ನೇ ಕೆಎಂಎಫ್ ಟಾರ್ಗೆಟ್ ಮಾಡಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: ಅಮುಲ್ ದೇಶದ ಬ್ರ್ಯಾಂಡ್‌, ಭಾರತದಲ್ಲೇ ಮಾರಾಟ ಮಾಡಿದ್ರೆ ಏನು ತೊಂದ್ರೆ – ಸಿ.ಟಿ ರವಿ ಪ್ರಶ್ನೆ

ಏನಿದು ವಿವಾದ?
ಅಮುಲ್ ಕುಟುಂಬ ಬೆಂಗಳೂರು (Bengaluru) ನಗರಕ್ಕೆ ಹಾಲು ಮತ್ತು ಮೊಸರಿನ ರೂಪದಲ್ಲಿ ಹೊಸ ತಾಜಾತನವನ್ನು ತರುತ್ತಿದೆ. ಕ್ವಿಕ್ ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದ್ದು, ಅವುಗಳನ್ನು ನಿಮ್ಮ ಮನೆ ಬಾಗಿಲಿಗೆ ಆರ್ಡರ್ ಮಾಡಬಹುದು ಎಂದು ಅಮುಲ್ ಕನ್ನಡ ಏಪ್ರಿಲ್ 5 ರಂದು ಟ್ವೀಟ್ ಮಾಡಿತ್ತು. ಈ ಟ್ವೀಟ್ ಮಾಡಿದ ಬೆನ್ನಲ್ಲೇ ಕನ್ನಡಿಗರು, ರಾಜಕೀಯ ನಾಯಕರು ಅಮುಲ್ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡಲು ಆರಂಭಿಸಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ‌ ಹರಿದಾಡುತ್ತಿರುವ ಸುದ್ದಿ ಸುಳ್ಳು: KMF ಸ್ಪಷ್ಟನೆ

ಅಮುಲ್ ಪರ ವಾದವೇನು?
ನಂದಿನಿ ಕೇವಲ ಕರ್ನಾಟಕದಲ್ಲಿ ಮಾತ್ರ ಹಾಲನ್ನು ಮಾರಾಟ ಮಾಡುತ್ತಿಲ್ಲ. ಉಳಿದ ರಾಜ್ಯಗಳಲ್ಲೂ ಹಾಲನ್ನು ಮಾರಾಟ ಮಾಡುತ್ತಿದೆ. ಹೀಗಿರುವಾಗ ಅಮುಲ್ ಬೇಡ ಎಂದು ಹೇಳಲು ಒಕ್ಕೂಟ ವ್ಯವಸ್ಥೆಯಲ್ಲಿ ಯಾವ ಅಧಿಕಾರವಿದೆ. ಯಾವುದು ಬೇಕೋ ಅದನ್ನು ಗ್ರಾಹಕ ಖರೀದಿಸುತ್ತಾನೆ.

Share This Article