ಕಾವೇರಿ ಕುರಿತಂತೆ ಸಮಾಧಾನಕರ ಪರಿಹಾರ ಕಾಣಬೇಕಿದೆ : ನಟ ಶಿವರಾಜ್ ಕುಮಾರ್

Public TV
2 Min Read

ಸ್ಯಾಂಡಲ್ ವುಡ್ (Sandalwood) ತಾರೆಯರ ಮೇಲೆ ಕಾವೇರಿ (Cauvery) ಹೋರಾಟಗಾರರು ಮುಗಿ ಬೀಳುತ್ತಿದ್ದಂತೆಯೇ ಒಬ್ಬೊಬ್ಬರೇ ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕನ್ನಡ ನಾಡು, ನುಡಿ, ಜಲದ ಬಗ್ಗೆ ಸದಾ ಅಪಾರ ಗೌರವವನ್ನು ಇಟ್ಟುಕೊಂಡು ಬಂದಿರುವ ಡಾ.ರಾಜ್ ಕುಮಾರ್ ಕುಟುಂಬ ಕೂಡ ಕಾವೇರಿ ಕುರಿತಂತೆ ಪ್ರತಿಕ್ರಿಯೆ ನೀಡಿದೆ. ಬೆಳಗ್ಗೆಯಷ್ಟೇ ರಾಘವೇಂದ್ರ ರಾಜಕುಮಾರ್ ಮಾತನಾಡಿದ್ದರು. ಇದೀಗ ಶಿವರಾಜ್ ಕುಮಾರ್  (Shivaraj Kumar) ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

‘ರೈತನ ಬೆನ್ನೆಲುಬು ಕಾವೇರಿ. ರಾಜ್ಯದಲ್ಲಿ ಈಗಾಗಲೇ ಮಳೆಯ ಅಭಾವ ಇರುವ ಕಾರಣದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಎರಡು ರಾಜ್ಯಗಳ ನಾಯಕರು, ನ್ಯಾಯಾಲಯ ಇದಕ್ಕೊಂದು ಸಮಾಧಾನಕರ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಇದು ನನ್ನ ಪ್ರಾರ್ಥನೆ ಕೂಡ ಆಗಿದೆ’ ಎಂದಿದ್ದಾರೆ.

ಹಲವು ದಿನಗಳಿಂದ ಮಂಡ್ಯ ಭಾಗದ ರೈತರು ಕಾವೇರಿ ಹೋರಾಟದಲ್ಲಿ ತೊಡಗಿಕೊಂಡಿದ್ದಾರೆ. ರೈತರು, ರೈತ ಸಂಘಗಳು ಮತ್ತು ಕನ್ನಡಪರ ಹೋರಾಟಗಾರು ಈ ಕಾವೇರಿ ಹೋರಾಟದಲ್ಲಿ ಪಾಲ್ಗೊಂಡಿದ್ದರೂ, ಕನ್ನಡ ಸಿನಿಮಾ ರಂಗದವರು ಮಾತ್ರ ಮೌನವಹಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಇವತ್ತು ಹಲವು ಕಡೆ ಚಿತ್ರರಂಗದವರ ವಿರುದ್ಧ ಪ್ರತಿಭಟನೆ ಕೂಡ ಮಾಡಿದ್ದರು. ವಿರೋಧದ ಹೋರಾಟ ಹೆಚ್ಚಾಗುತ್ತಿದ್ದಂತೆಯೇ ಒಬ್ಬೊಬ್ಬ ನಟರು ಸೋಷಿಯಲ್ ಮೀಡಿಯಾ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.

ಹಿರಿಯ ನಟಿ, ಮಂಡ್ಯ ಕ್ಷೇತ್ರದ ಸಂಸದೆಯೂ ಆಗಿರುವ ಸುಮಲತಾ ಅಂಬರೀಶ್ ಅವರು ನಿರಂತರವಾಗಿ ರೈತರ ಹೋರಾಟಗಳಿಗೆ ಬೆಂಬಲ ಸೂಚಿಸುತ್ತಾ ಬಂದಿದ್ದಾರೆ. ಜಲಶಕ್ತಿ ಸಚಿವರನ್ನು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ನಿನ್ನೆಯಷ್ಟೇ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಲ್ಲದೇ, ನೇರವಾಗಿ ಅವರು ಹೋರಾಟಕ್ಕೂ ಇಳಿದಿದ್ದರು. ಇವರ ಹೊರತಾಗಿ ಬೇರೆ ಯಾವ ಕಲಾವಿದರೂ ಹೋರಾಟದಲ್ಲಿ ಭಾಗಿಯಾಗಿಲ್ಲ ಎನ್ನುವ ಅಸಮಾಧಾನ ಹೋರಾಟಗಾರರಲ್ಲಿ ಇತ್ತು.

ಬೆಳಗ್ಗೆ ನಟ ದರ್ಶನ್ ಟ್ವೀಟ್ ಮಾಡಿ, ‘ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ, ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ’ ಎಂದು ಬರೆದಿದ್ದರು.

ಕೆಲ ಗಂಟೆಗಳು ಹಿಂದೆ ಸುದೀಪ್ (Sudeep) ಕೂಡ ಟ್ವೀಟ್ ಮಾಡಿದ್ದು, ‘ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು  ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ’ ಎಂದು ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

 

ಮೈಸೂರಿನ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಘವೇಂದ್ರ ರಾಜ್ ಕುಮಾರ್, ‘ನಮ್ಮ ಕುಟುಂಬ ಮತ್ತು ಚಿತ್ರರಂಗಕ್ಕೆ ನಾಡು ನುಡಿಯ ವಿಚಾರದಲ್ಲಿ ಹೋರಾಟಕ್ಕೆ ಯಾವಾಗಲೂ ಮುಂದು. ಫಿಲ್ಮ್ ಚೇಂಬರ್ ಕರೆಗಾಗಿ ನಾವು ಕಾಯುತ್ತಿದ್ದೇವೆ. ಹೋರಾಟದಲ್ಲಿ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲವೆಂದು’ ಹೇಳಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್