ಬೆಂಗಳೂರು: ಚಾರ್ಜ್‌ಗೆ ಹಾಕಿದ್ದ ಇವಿ ಬೈಕ್ ಸ್ಫೋಟಗೊಂಡ ಘಟನೆ ಬಸವೇಶ್ವರನಗರದ ಶಿವನಹಳ್ಳಿ 1ನೇ ಕ್ರಾಸ್‍ನಲ್ಲಿ ನಡೆದಿದೆ.
ಮನೆ ಬೇಸ್‍ಮೆಂಟ್‍ನಲ್ಲಿ ಚಾರ್ಜ್‍ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಿಸಿದೆ. ಬಳಿಕ ಬೆಂಕಿ ಹೊತ್ತಿ ಉರಿದಿದೆ. ಇದರಿಂದ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಇದನ್ನೂ ಓದಿ: ವಿಜಯದಶಮಿ ದಿನವೇ ಬೆಂಗ್ಳೂರಲ್ಲಿ ಅಗ್ನಿ ಅವಘಡ – ಸುಟ್ಟು ಕರಕಲಾದ 19 ಇವಿ ಬೈಕ್‌ಗಳು
ಸ್ಥಳಕ್ಕಾಗಮಿಸಿ ಬೆಂಕಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದ್ದಾರೆ. ಇವಿ ಬೈಕ್ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಇತ್ತೀಚೆಗೆ ಯಲಚೇನಹಳ್ಳಿಯ ಕಮರ್ಷಿಯಲ್ ಕಟ್ಟಡವೊಂದರ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್ ಹೀಟ್ ಆಗಿ ಅಲ್ಲಿದ್ದ ಬೈಕ್‌ಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಜೊತೆಗೆ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಆರು ಸಿಲಿಂಡರ್‌ಗಳ ಗ್ಯಾಸ್ ಸೋರಿಕೆಯಾಗಿದ್ದು, ಒಂದು ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಇದನ್ನೂ ಓದಿ: ಬೆಂಗ್ಳೂರಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್‌ಗಳು ಭಸ್ಮ