ಮಂಗಳೂರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ

Public TV
0 Min Read

ಮಂಗಳೂರು: ಕಾರಾಗೃಹದಲ್ಲೇ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪ್ರಕಾಶ ಗೋಪಾಲ್ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ಕೈದಿ. ಈತ ಪೋಕ್ಸೊ ಪ್ರಕರಣದಲ್ಲಿ ಬಂಧಿತನಾಗಿದ್ದ. ಇಂದು ಜೈಲಿನ ಶೌಚಾಲಯದ ಕಿಟಕಿ ಗ್ರಿಲ್‌ಗೆ ಟವಲ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಾ.11 ರಂದು ಪ್ರಕಾಶ್ ಗೋಪಾಲ್ ಮೂಲ್ಯನನ್ನು ಮೂಡಬಿದ್ರೆಯಲ್ಲಿ ಪೊಲೀಸರು ಬಂಧಿಸಿದ್ದರು. ನೆರೆ ಮನೆಯ 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಬಂಧನವಾಗಿದ್ದ.

ಜೈಲಿಗೆ ಬರ್ಕೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article