ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರಿಗೆ ಗಾಯ

1 Min Read

ಚಿತ್ರದುರ್ಗ: ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು (Hiriyur) ತಾಲೂಕಿನ ಪಟ್ರೆಹಳ್ಳಿಯ (Patrehalli) ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಇನ್ನೋವಾ ಕಾರು ಕೆಟ್ಟಿದ್ದ ಹಿನ್ನೆಲೆ ರಿಪೇರಿಗೆ ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ವರ್ಕ್ ಫ್ರಮ್ ಹೋಂ ಹೆಸರಲ್ಲಿ ಸೈಬರ್ ಕಿರಾತಕರು ಆಕ್ಟೀವ್ – ಮಗನ ಮಾತು ಕೇಳಿ 40,000 ರೂ. ಕಳೆದುಕೊಂಡ ಮಹಿಳೆ

ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Share This Article