ಪಂಕ್ಚರ್ ಆಗಿದ್ದ ಲಾರಿಗೆ ಆಂಧ್ರ ಬಸ್ ಡಿಕ್ಕಿ- ಪ್ರಯಾಣಿಕನ ಕಾಲು ಮುರಿತ

Public TV
1 Min Read

ಚಿಕ್ಕಬಳ್ಳಾಪುರ: ಹೆದ್ದಾರಿಯಲ್ಲಿ ಪಂಕ್ಚರ್ ಆಗಿ ನಿಂತಿದ್ದ ಲಾರಿಗೆ ಆಂಧ್ರ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಅಗಲಗುರ್ಕಿ ಬಳಿ ನಡೆದಿದೆ.

ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕನ ಕಾಲು ಮುರಿದಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ತಡರಾತ್ರಿ 2 ಗಂಟೆ ಸುಮಾರಿಗೆ ಅಪಘಾತವಾಗಿದ್ದು, ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

6 ಮಂದಿ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಂದಹಾಗೆ ಮಹಾರಾಷ್ಟ್ರ ಮೂಲದ ಲಾರಿ ಕಲ್ಲಿದ್ದಲು ತುಂಬಿಕೊಂಡು ಸಾಗುತ್ತಿತ್ತು. ಬಸ್ ಆಂಧ್ರದ ಕದಿರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿತ್ತು ಎನ್ನಲಾಗಿದೆ.

ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *