ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್‌ಗಳ ಆಪರೇಷನ್‌ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮುನಿಯಪ್ಪ, ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಫಾರಿನ್‌ಗೆ ಅನ್ನಭಾಗ್ಯ ಅಕ್ಕಿ ಸಾಗಾಣೆ ಪ್ರಕರಣದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಆಹಾರ ಧಾನ್ಯಗಳ ಸರಬರಾಜು ವಾಹನಗಳಿಗೆ ಜಿಪಿಎಸ್ ಟ್ರ‍್ಯಾಕರ್, ಗೋದಮುಗಳಿಗೆ ಸಿಸಿಟಿವಿ ಕಡ್ಡಾಯ ಅಳವಡಿಕೆಗೆ ಸಿಎಂ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಅಂದಹಾಗೆ ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.