ವೈನ್ ಮಾರಾಟ ವಿರೋಧಿಸಿ ಫೆ.14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣಾ ಹಜಾರೆ

Public TV
1 Min Read

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮದ್ಯವನ್ನು ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್ ಗಳಲ್ಲಿ ಮಾರಾಟ ಮಾಡಬಹುದು ಎಂಬ ಸರ್ಕಾರದ ಆದೇಶವನ್ನು ವಿರೋಧಿಸಿ ಫೆ.14 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮಾಡುವುದಾಗಿ ಘೋಷಿಸಿದ್ದಾರೆ.

ಜನವರಿ 27 ರಂದು, ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿನ ಸೂಪರ್ ಮಾರ್ಕೆಟ್‍ಗಳಲ್ಲಿ ಮತ್ತು ವಾಕ್-ಇನ್ ಅಂಗಡಿಗಳಲ್ಲಿ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು. ಈ ಹಿನ್ನೆಲೆ ಶನಿವಾರ ಅಣ್ಣಾ ಹಜಾರೆ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಜ್ಞಾಪನೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಇತ್ತೀಚೆಗೆ ಮದ್ಯ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಕಿನಿ ಹಾಕಿಕೊಳ್ಳಿ ಎಂದು ಸಂದೇಶ ಕೊಡ್ತಿರಲ್ಲಾ, ನಾಚಿಕೆಯಾಗಬೇಕು: ಪ್ರಿಯಾಂಕಾ ವಿರುದ್ಧ ಮುತಾಲಿಕ್ ಕಿಡಿ

ಅಣ್ಣಾ ಹಜಾರೆ ಅವರ ಈ ಪತ್ರಕ್ಕೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಸರ್ಕಾರದ ಮದ್ಯದ ವಿಷಯದಲ್ಲಿ ಮಾಡಿರುವ ಫೋಷಣೆ ರಾಜ್ಯದ ಪಾಲಿಗೆ ದುರದೃಷ್ಟಕರ ಮತ್ತು ಇದು ಮುಂದಿನ ಪೀಳಿಗೆಗೆ ಅಪಾಯಕಾರಿ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಕಛೇರಿ ಹೊರಡಿಸಿದ ಹೇಳಿಕೆಯ ಪ್ರಕಾರ, 1,000 ಚದರ ಅಡಿ ಅಥವಾ ಅದಕ್ಕಿಂತ ಹೆಚ್ಚಿನ ವಿಸ್ತೀರ್ಣವನ್ನು ಹೊಂದಿರುವ ಮಹಾರಾಷ್ಟ್ರದ ಅಂಗಡಿಗಳು ಮತ್ತು ಸಂಸ್ಥೆಗಳ ಕಾಯ್ದೆಯಡಿ ನೋಂದಾಯಿಸಲ್ಪಟ್ಟಿರುವ ಸೂಪರ್ ಮಾರ್ಕೆಟ್‍ಗಳು ಮತ್ತು ಮಳಿಗೆಗಳಲ್ಲಿ ‘ಶೆಲ್ಫ್-ಇನ್-ಶಾಪ್’ ವಿಧಾನವನ್ನು ಅಳವಡಿಸಿಕೊಳ್ಳಬಹುದು ಎಂದು ತಿಳಿಸಲಾಗಿತ್ತು. ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ

ಪೂಜಾ ಸ್ಥಳಗಳು ಮತ್ತು ಶಿಕ್ಷಣ ಸಂಸ್ಥೆಗಳ ಸಮೀಪವಿರುವ ಸೂಪರ್ ಮಾರ್ಕೆಟ್‍ಗಳಲ್ಲಿ ವೈನ್ ಮಾರಾಟ ಮಾಡಲು ಅನುಮತಿ ನೀಡಲಾಗುವುದಿಲ್ಲ. ಇದಲ್ಲದೆ, ನಿಷೇಧ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ವೈನ್ ಮಾರಾಟವನ್ನು ಅನುಮತಿಸಲಾಗುವುದಿಲ್ಲ. ಸೂಪರ್ ಮಾರ್ಕೆಟ್‍ಗಳು ವೈನ್ ಮಾರಾಟ ಮಾಡಲು ಪರವಾನಗಿಗಾಗಿ 5,000 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಈ ಪ್ರಕಟಣೆಯಲ್ಲಿ ತಿಳಿಸಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *