ಗಮನಿಸಿ, ಮುಂದಿನ 5 ದಿನಗಳ ಕಾಲ ಬೆಂಗ್ಳೂರಲ್ಲಿ ಭಾರೀ ಮಳೆ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆಯಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಇನ್ನೂ 5 ದಿನಗಳ ಕಾಲ ಮುಂದುವರಿಯಲಿದೆ.

ಮೋಡ ಕವಿದ ವಾತಾವರಣ ಇರಲಿದ್ದು ಗುಡುಗು ಸಹಿತ ಮಳೆಯಾಲಿದೆ. ತಮಿಳುನಾಡಿನ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ 5 ದಿನ ಮಳೆ ಉಂಟಾಗಲಿದೆ. ಇದನ್ನೂ ಓದಿ: ಬೇಸಿಗೆಯ ಮಳೆಗೆ ಮುಳುಗಿದ ಬೆಂಗಳೂರು – ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

Rain

ಈ 5 ದಿನಗಳಲ್ಲಿ ಮೂರು ದಿನ ಜೋರು ಮಳೆ, 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ರಾಜ್ಯದ ಉತ್ತರ ಒಳನಾಡು ಭಾಗಗಳಲ್ಲಿ 4 ದಿನ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 3 ದಿನ ಹಾಗೂ ಕರಾವಳಿ ಜಿಲ್ಲೆಗಳಲ್ಲಿ 3 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಎ.ಪ್ರಸಾದ್ ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *