ಭವಿಷ್ಯದಲ್ಲಿ ಗಾಳಿ ಗಂಡಾಂತರ ಬಂದು ತಿನ್ನಲು ಅನ್ನವಿಲ್ಲದ ಸ್ಥಿತಿ ಬರಲಿದೆ: ಕೋಡಿ ಶ್ರೀಗಳ ಭವಿಷ್ಯ

Public TV
1 Min Read

ಚಿಕ್ಕಬಳ್ಳಾಪುರ: ಸದ್ಯ ಕೊರೊನಾ ಮಹಾಮಾರಿಯ ಶಕ್ತಿ ಕುಂದಿದ್ದು ಎಲ್ಲವೂ ಸರಿ ಹೋಗಲಿದೆ. ಆದರೆ ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರದಿಂದ ಜನತೆ ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದೆ ನರಳುತ್ತಾರೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ ನಗರಕ್ಕೆ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದ ಶ್ರೀಗಳು, ಕೊರೊನಾ ಪೂರ್ವದಲ್ಲಿಯೇ ನಾನು ಹೇಳಿದ್ದೆ, ಸಂಕಟ ಬಂದಾಗ ವೆಂಕಟರಮಣ ಎನ್ನುವ ಜನರಿಗೆ ಬುದ್ಧಿ ಕಲಿಸಬೇಕೆನ್ನುವ ಕಾರಣಕ್ಕಾಗಿಯೇ ಕೊರೊನಾ ದೇವರನ್ನು ಹಿಡಿದುಕೊಂಡು ಭೂಮಿಗೆ ಬಂತು ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ಕೊರೊನಾ ಅಬ್ಬರ ಎಷ್ಟಿತ್ತು ಎನ್ನುವುದಕ್ಕೆ ದೇವಾಲಯಗಳು ಬಾಗಿಲು ಮುಚ್ಚಿದ್ದೇ ಸಾಕ್ಷಿಯಾಗಿದೆ. ತಿರುಪತಿ, ಧರ್ಮಸ್ಥಳ, ಚಾಮುಂಡೇಶ್ವರಿ ದೇವಾಲಯಗಳ ಬಾಗಿಲು ಹಾಕಿಸಿತು. ಮಠ, ಮಾನ್ಯಗಳು ಬಾಗಿಲು ಹಾಕುವಂತಾಯಿತು ಎಂದರು. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ

ಕೊರೊನಾ ಅಬ್ಬರ ತಗ್ಗಿತು ಎನ್ನುವಾಗ ನೆಲ ಗಂಡಾಂತರ ಪ್ರಾರಂಭವಾಗಿ ಏಕಶಿಲಾ ಪರ್ವತವಾದ ನಂದಿಗಿರಿಧಾಮದ ನೆಲವೇ ಕುಸಿದಂತೆ ಮಲೆಮಹದೇಶ್ವರ ಬೆಟ್ಟ, ಮಡಿಕೇರಿ ಮೊದಲಾದೆಡೆ ಸಮಸ್ಯೆ ಎದುರಾಯಿತು. ಇದರ ಜತೆಗೆ ಜಲಗಂಡಾಂತರವೂ ಸಹ ಎದುರಾಗಿ ಜನಜಾನುವಾರು ಸಹಿತ ಸಕಲ ಜೀವರಾಶಿಯನ್ನು ಹಿಂಡಿ ಹಿಪ್ಪೆ ಮಾಡಿತು. ಮುಂದೆ ಗಾಳಿ ಗಂಡಾಂತರ ಬಂದು ಜನರನ್ನು ಬಾಧಿಸಲಿದೆದೆ. ಗಾಳಿ ಗಂಡಾಂತರವೂ ಕೂಡ ಮನುಷ್ಯನಿಗೆ ಅಪಾಯಕಾರಿ ನೆಲೆಯಲ್ಲಿಯೇ ಬಂದು ಕಷ್ಟವನ್ನು ತಂದರೂ ಮುಂದೆ ಹೋಗಲಿದೆ. ಆದರೆ ಇದು ಹೋಗುವ ಕಾಲಕ್ಕೆ ವಿಪರೀತ ಬರಗಾಲವನ್ನು ತಂದು ತಿನ್ನಲು ಅನ್ನವಿಲ್ಲದೆ, ಕುಡಿಯಲು ನೀರಿಲ್ಲದ ಸ್ಥಿತಿಯನ್ನು ತಂದೊಡ್ಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.  ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಶಿಕ್ಷಣ ಬೇಕು, ಹಿಜಬ್ ಅಲ್ಲ : ಬಿಸ್ವಾ ಶರ್ಮಾ

Share This Article
Leave a Comment

Leave a Reply

Your email address will not be published. Required fields are marked *