ಇಂಡಿಗೋ ವಿಮಾನಕ್ಕೆ ಮತ್ತೆ ಬಾಂಬ್ ಬೆದರಿಕೆ

Public TV
1 Min Read

ನವದೆಹಲಿ: ಚೆನ್ನೈನಿಂದ (Chennai) ಮುಂಬೈಗೆ (Mumbai) ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ (Indigo Flight) ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಬೆದರಿಕೆ ಬೆನ್ನಲ್ಲೇ ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಮುಂಬೈನಲ್ಲಿ ಇಳಿದ ನಂತರ ವಿಮಾನ ಸಿಬ್ಬಂದಿ ಪ್ರೊಟೋಕಾಲ್ ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕಗೊಳಿಸಲಾಯಿತು.

ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನವು ಪ್ರಸ್ತುತ ತಪಾಸಣೆಗೆ ಒಳಪಟ್ಟಿದೆ. ಎಲ್ಲಾ ಭದ್ರತಾ ತಪಾಸಣೆಗಳನ್ನು ಪೂರ್ಣಗೊಳಿಸಿದ ನಂತರ ವಿಮಾನವನ್ನು ಟರ್ಮಿನಲ್ ಪ್ರದೇಶದಲ್ಲಿ ಹಿಂತಿರುಗಿಸಲಾಗುತ್ತದೆ ಎಂದು ಏರ್‌ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶ

 

ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಎರಡನೇ ಘಟನೆಯಾಗಿದೆ. ಈ ಹಿಂದೆ ಮೇ 28 ರಂದು ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ವಿಮಾನಕ್ಕೆ ಇದೇ ರೀತಿಯ ಬೆದರಿಕೆ ಬಂದಿತ್ತು. ಬೆದರಿಕೆಯ ನಂತರ ವಿಮಾನದಲ್ಲಿದ್ದ ಪ್ರಯಾಣಿಕರನ್ನು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ನಿರ್ಗಮನದ ಮೂಲಕ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ ಕೇಸ್ ಎಸ್‌ಐಟಿ ತನಿಖೆಗೆ – ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ತನಿಖಾ ತಂಡ

ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ ಸ್ಥಳಾಂತರಿಸುವಿಕೆಯನ್ನು 90 ಸೆಕೆಂಡುಗಳಲ್ಲಿ ಪೂರ್ಣಗೊಳಿಸಬೇಕಾಗುತ್ತದೆ. ತುರ್ತು ಪರಿಸ್ಥಿತಿಯಲ್ಲಿ ಪ್ರಯಾಣಿಕರು ತಮ್ಮ ಯಾವುದೇ ಸಾಮಾನುಗಳನ್ನು ತೆಗೆದುಕೊಂಡು ಹೋಗಬಾರದು. ದೆಹಲಿ ಘಟನೆಯಲ್ಲಿ ಸುರಕ್ಷತಾ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿದ್ದರಿಂದ ಇಂಡಿಗೋ ಇಬ್ಬರು ಪೈಲಟ್‌ಗಳು ಮತ್ತು ನಾಲ್ವರು ಕ್ಯಾಬಿನ್ ಸದಸ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಇದನ್ನೂ ಓದಿ: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ – ಸಿಎಂ, ಡಿಸಿಎಂಗೆ ಜಾಮೀನು

Share This Article