ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಹಾರಾಟ ನಿಲ್ಲಿಸಿದ ʻತೇಜಸ್‌ʼ- 4 ತಿಂಗಳಲ್ಲಿ 7ನೇ ಚೀತಾ ಸಾವು!

Public TV
2 Min Read

ಭೋಪಾಲ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನಕ್ಕೆ ಬಿಡಲಾಗಿದ್ದ ಚೀತಾಗಳ ಪೈಕಿ ʻತೇಜಸ್‌ʼ (Tejas) ಹೆಸರಿನ ಮತ್ತೊಂದು ಗಂಡು ಚೀತಾ (Cheetah) ಸಾವನ್ನಪ್ಪಿದ್ದು, 4 ತಿಂಗಳಲ್ಲಿ ಇದು 7ನೇ ಪ್ರಕರಣವಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಚಿರತೆಯ ಕತ್ತಿನ ಮೇಲ್ಭಾಗದಲ್ಲಿ ಗಾಯದ ಗುರುತುಗಳು ಕಂಡುಬಂದಿದೆ. ಇದನ್ನು ಗಮನಿಸಿದ ಮೇಲ್ವಿಚಾರಣಾ ತಂಡ ತಕ್ಷಣ ವೈದ್ಯರಿಗೆ (Doctors) ಮಾಹಿತಿ ನೀಡಿದೆ. ನಂತರ ವೈದ್ಯರು ಪ್ರಾಣಿಯನ್ನ ಪರೀಕ್ಷಿಸಿ ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ʻತೇಜಸ್‌ʼ ಮೃತಪಟ್ಟಿದೆ. ಕಳೇಬರವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವರದಿ ಬಂದ ನಂತರ ನಿಖರ ಕಾರಣ ತಿಳಿಯಲಿದೆ ಎಂದು ಪ್ರಧಾನ ಅರಣ್ಯ ಸರಂಕ್ಷಣಾಧಿಕಾರಿ ಜೆ.ಎಸ್‌ ಚೌಹಾಣ್‌ ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಸ್ಥಳಾಂತರಿಸಿದ್ದ ಮತ್ತೊಂದು ಚೀತಾ ಸಾವು

ಕಳೆದ ಮಾರ್ಚ್‌ 27ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಕಿಡ್ನಿ ಸೋಂಕಿನಿಂದ ಸಾವನ್ನಪ್ಪಿತ್ತು, ಏಪ್ರಿಲ್‌ 23ರಂದು ಉದಯ್‌ ಹೆಸರಿನ ಗಂಡು ಚೀತಾ ಶ್ವಾಸಕೋಶದ ವೈಫಲ್ಯದಿಂದ, ಮೇ 9ರಂದು ದಕ್ಷಾ0 ಹೆಸರಿನ ಹೆಣ್ಣು ಚೀತಾ ಬೇಟೆಯಾಡುವ ವೇಳೆ ಗಾಯಗೊಂಡು ಮೃತಪಟ್ಟಿತ್ತು. ಆ ನಂತರ ವಿವಿಧ ಕಾರಣದಿಂದ ಮೂರು ಚೀತಾ ಮರಿಗಳು ಮೃತಪಟ್ಟಿದ್ದವು. ಒಟ್ಟು 6 ಚೀತಾ ಸಾವನ್ನಪ್ಪಿದರೂ ಅರಣ್ಯ ಇಲಾಖೆ ಹಾಗೂ ಸರ್ಕಾರ ಆರೋಪಗಳನ್ನ ತಳ್ಳಿಹಾಕಿತ್ತು. ಇದೀಗ 7ನೇ ಚೀತಾ ಸಾವನ್ನಪ್ಪಿದೆ. ಇದನ್ನೂ ಓದಿ: ಕುನೋ ನ್ಯಾಷನಲ್ ಪಾರ್ಕ್‌ನಲ್ಲಿ ಇನ್ನೆರಡು ಚೀತಾ ಮರಿಗಳ ಸಾವು – ಕಳೆದ ಎರಡು ತಿಂಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಳ

ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು (Wildlife) ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ (Namibia) ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ತರಲಾಗಿತ್ತು. ತಮ್ಮ ಜನ್ಮದಿನವಾದ ಸೆ.17 ರಂದು ಪ್ರಧಾನಿ ಮೋದಿ (Narendra Modi) ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಸ್ವತಃ ಬೇಟೆಯಾಡಲು ಆರಂಭಿಸಿದ್ದವು. ಇದನ್ನೂ ಓದಿ: ನಮೀಬಿಯಾ-ದಕ್ಷಿಣ ಆಫ್ರಿಕಾ ಚೀತಾಗಳ ನಡುವೆ ರಣರೋಚಕ ಕಾದಾಟ – ʻಅಗ್ನಿʼಗೆ ಗಾಯ

ಚೀತಾ ವಿಶೇಷತೆಯೇನು?
ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 2009ರಲ್ಲಿ ಆಫ್ರಿಕನ್ ಚಿರತೆ ಯೋಜನೆ ಮಾಡಲಾಗಿತ್ತು, ಆದರೆ ಕಾರಣಾಂತರಗಳಿಂದ ಅನುಷ್ಠಾನವಾಗಿರಲಿಲ್ಲ. ಅದಾದ 75 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಅಲ್ಲಿನ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. 8 ಚೀತಾಗಳ ಸ್ಥಳಾಂತರಕ್ಕೆ 75 ಕೋಟಿ ರೂ. ಖರ್ಚು ಮಾಡಲಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್