ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ – ಚಾಲಕ ಸಾವು

Public TV
1 Min Read

ಬೀದರ್: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ (Basava Kalyana) ತಾಲೂಕಿನ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ಲಾರಿ ಚಾಲಕನನ್ನು ಶ್ರೀಪಾದ ನಿರುಗುಡಿ (36) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಇನ್ನೊಂದು ಲಾರಿಯು ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಲಾರಿಗಳು ನಜ್ಜುಗುಜ್ಜಾಗಿದ್ದು, ನಿಂತಿದ್ದ ಲಾರಿ ಚಾಲಕ ಸಾವನ್ನಪ್ಪಿದ್ದಾನೆ.

ಲಾರಿ ಅಪಘಾತದಿಂದ ರಾತ್ರಿ ಕೆಲವೊತ್ತು ಟ್ರಾಫಿಕ್ ಜಾಮ್ ಕೂಡಾ ಆಗಿತ್ತು. ಬಳಿಕ ಜೆಸಿಬಿ ಮೂಲಕ ರಸ್ತೆಯಲ್ಲಿದ್ದ ಎರಡು ಲಾರಿಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಈ ಕುರಿತು ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪೊಲೀಸ್ ಅಧಿಕಾರಿ ಸೋಗಿನಲ್ಲಿ ಯುವತಿಯರ ರೂಮ್‍ಗೆ ನುಗ್ಗಿ ಕಿರುಕುಳ – ಹೋಮ್‌ಗಾರ್ಡ್‌ ಅರೆಸ್ಟ್‌

Share This Article