ವ್ಯಕ್ತಿಯ ತಲೆ ಕತ್ತರಿಸಿ ಬಿದಿರಿನ ಬೇಲಿಗೆ ನೇತುಹಾಕಿದ್ದ ದುಷ್ಕರ್ಮಿಗಳು – ಮಣಿಪುರದ ಮತ್ತೊಂದು ವೀಡಿಯೋ ವೈರಲ್‌

Public TV
2 Min Read

ಇಂಫಾಲ್:‌ ಮಣಿಪುರದಲ್ಲಿ (Manipur) ಇಬ್ಬರು ಮಹಿಳೆಯರನ್ನ ಬೆತ್ತಲೆಗೊಳಿಸಿ ಮೆರವಣಿಗೆ ( Manipur Women Paraded) ನಡೆಸಿದ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಮತ್ತೊಂದು ವೀಡಿಯೋ ರಾಜ್ಯದ ಜನರನ್ನ ಬೆಚ್ಚಿ ಬೀಳಿಸಿದೆ. ವ್ಯಕ್ತಿಯೊಬ್ಬನ ತಲೆಯನ್ನ ಕತ್ತರಿಸಿ ಬಿದಿರಿನ ಬೇಲಿಗೆ ನೇತು ಹಾಕಿದ್ದು, ಈ ಕುರಿತ ವೀಡಿಯೋ ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡ್ತಿದೆ.

ಡೇವಿಡ್‌ ಥಿಕ್‌ ಎಂದು ಗುರುತಿಸಲಾದ ಕುಕಿ ವ್ಯಕ್ತಿಯ ತುಂಡರಿಸಿದ ತಲೆಯನ್ನು ಬಿಷ್ಣುಪುರ ಜಿಲ್ಲೆಯ ವಸತಿ ಪ್ರದೇಶದಲ್ಲಿ ಬಿದಿರಿನ ಬೇಲಿಗೆ ನೇತು ಹಾಕಿರುವ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ

ಇದೇ ತಿಂಗಳ ಜುಲೈ 2ರಂದು ಮಧ್ಯಾಹ್ನ 12 ವೇಳೆಗೆ ನಡೆದ ಘರ್ಷಣೆಯಲ್ಲಿ ಡೇವಿಡ್‌ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ಒಟ್ಟು ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋದು ತಿಳಿದುಬಂದಿದೆ. ವೀಡಿಯೋ ಬೆಳಕಿಗೆ ಬಂದ ನಂತರ ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ ಉಂಟಾಗಿದ್ದು, ಪ್ರತಿಭಟನೆ ಇನ್ನಷ್ಟು ಹಿಂಸಾತ್ಮಕ ರೂಪ ತಾಳುತ್ತಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ ಹತೋಟಿಗೆ ತರಲು ಇಬ್ಬರು ಉನ್ನತ ಅಧಿಕಾರಿಗಳ ನಿಯೋಜನೆ

ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನ ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಬುಧವಾರ ಸೋಶಿಯಲ್‌‌ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಕಳೆದ ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿತ್ತು.

ವಿಡೀಯೋ ವೈರಲ್‌ ಆದ ಬಳಿಕ ರೊಚ್ಚಿಗೆದ್ದ ಜನ ಪ್ರತಿಭಟನೆಗೆ ಮುಂದಾಗಿದ್ದರು. ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಮಣಿಪುರದ ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸರು ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೇಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಗುರುವಾರ ಸಂಜೆ ವೇಳೆಗೆ ನಾಲ್ವರನ್ನ ಬಂಧಿಸಲಾಗಿತ್ತು. ಆದರೂ ಪ್ರತಿಭಟನಾಕಾರರ ಗುಂಪು ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿತ್ತು.

ಬರೋಬ್ಬರಿ 77 ದಿನಗಳಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್‌ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇದು ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್