ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – ಅಕ್ಟೋಬರ್ 1ರಿಂದಲೇ ಪರಿಷ್ಕೃತ ದರ ಜಾರಿಗೆ ಸಾಧ್ಯತೆ!

Public TV
4 Min Read

ಬೆಂಗಳೂರು: ಒಂದೇ ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದ ಸರ್ಕಾರ ಈಗ ಮತ್ತೊಮ್ಮೆ ಶಾಕ್ ಕೊಡಲು ಮುಂದಾಗಿದೆ. ಅಕ್ಟೋಬರ್ ಮೊದಲ ವಾರದಿಂದಲೇ ಮತ್ತೆ ಪರಿಷ್ಕೃತ ದರ ಜಾರಿ ಮಾಡುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಈಗಾಗಲೇ ಒಂದು ವರ್ಷದ ಅವಧಿಯಲ್ಲಿ ಎರಡು ಬಾರಿ ಮದ್ಯ ದರ ಏರಿಕೆ (Liquor Price Increase) ಮಾಡಿ ಸರ್ಕಾರ ಶಾಕ್ ನೀಡಿತ್ತು. ಇದೀಗ ಮತ್ತೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ.ಇದನ್ನೂ ಓದಿ: ಸಿಖ್ಖರ ಅವಹೇಳನ ಆರೋಪ – ಚಂಡೀಗಢ ಕೋರ್ಟ್‌ನಿಂದ ಕಂಗನಾಗೆ ʻಎಮರ್ಜೆನ್ಸಿʼ ನೋಟಿಸ್‌!

ಹೌದು. 2023ರ ಜುಲೈನಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು (CM Siddaramaiah) ಐಎಂಎಲ್ ಮೇಲೆ ಶೇ.20 ಮತ್ತು ಬಿಯರ್ ಮೇಲೆ ಶೇ.10 ಅಬಕಾರಿ ಸುಂಕ ಹೆಚ್ಚಿಸಿದ್ದರು. ಇದಕ್ಕೂ ಮುನ್ನ ರಾಜ್ಯದಲ್ಲಿ ತಯಾರಿಸಲಾದ ಅಥವಾ ಆಮದು ಮಾಡಿಕೊಳ್ಳುವ ಬಿಯರ್ ಬಾಟಲ್ ಮೇಲೆ ಹೆಚ್ಚವರಿ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಲಾಗಿತ್ತು.

ಈಗ ಮತ್ತೊಮ್ಮೆ ಬಿಯರ್ ಬೆಲೆ ಏರಿಕೆ ಬಗ್ಗೆ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸರ್ಕಾರ ಅಸ್ತು ಅಂದಿದ್ದು, ಅ.1 ರಿಂದ ಬೆಲೆ ಏರಿಕೆಯಾಗುವ ಸಾಧ್ಯತೆ ಖಚಿತವಾದಂತಿದೆ. ಕಳೆದ ಆ.29ರಿಂದ ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ ದರ ಇಳಿಸಿದ ಬೆನ್ನಲ್ಲೇ ಬಿಯರ್ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದ್ದು, ಅ.1ರಿಂದ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.

ಇನ್ನೂ ಸರ್ಕಾರದ ನಿರ್ಧಾರಕ್ಕೆ ಬಾರ್ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಪರಿಷ್ಕರಣೆಯಾಗುತ್ತಿದೆ. ರಾಜ್ಯದಲ್ಲಿ ಬಿಯರ್ ಮಾರಾಟ ಹೆಚ್ಚಾಗಿದೆ. ಈ ಮಧ್ಯೆ ಸರ್ಕಾರ ಸುಂಕ ಹೆಚ್ಚಳ ಮಾಡಿದರೆ ಗ್ರಾಹಕರ ಜೊತೆಗೆ ಮಾರಾಟಗಾರರಿಗೂ ಹೊಡೆತ ಬೀಳಲಿದೆ. ಸರ್ಕಾರ ಏರಿಕೆ ಬದಲು ದರ ಇಳಿಕೆ ಬಗ್ಗೆ ಯೋಚನೆ ಮಾಡಿದರೆ ಹೆಚ್ಚು ಮಾರಾಟವಾಗಲಿದೆ. ಈ ಮೂಲಕ ಸರ್ಕಾರ ಮತ್ತು ಮಾಲೀಕರಿಗೆ ಅನೂಕೂಲವಾಗಲಿದೆ ಎನ್ನುತ್ತಿದ್ದಾರೆ.

ಯಾವ್ಯಾವ ಬಿಯರ್ ಬೆಲೆ ಎಷ್ಟಾಗಬಹುದು…?

ಬಿಯರ್                              ಈಗಿನದರ                ಪರಿಷ್ಕೃತ ದರ ಸಾಧ್ಯತೆ

ಬೂಮ್ ಸ್ಟ್ರಾಂಗ್                      163                           172/175
ಬಡ್ವೈಸರ್ ಮ್ಯಾಗ್ನಮ್                                                213/230
ಬಡ್ವೈಸರ್ ಪ್ರಿಮಿಯಂ              200                             215
ಕೆಎಫ್ ಪ್ರಿಮಿಯಂ                   168                              180
ಕೆಎಫ್ ಸ್ಟ್ರೋಮ್                    177                              187
ಕೆಎಫ್ ಸ್ಟ್ರಾಂಗ್                      168                             180
ಕೆಎಫ್ ಅಲ್ಟ್ರಾ                        199                              220
ಟ್ಯುಬರ್ಗ್ ಸ್ಟ್ರಾಂಗ್                   168                            180
ಯುಬಿ ಪ್ರಿಮೀಯಂ                   131                              143
ಯುಬಿ ಸ್ಟ್ರಾಂಗ್                       131                               142

ಇಷ್ಟೇ ಅಲ್ಲದೆ ಇನ್ನುಳಿದ ಬ್ರ‍್ಯಾಂಡ್‌ಗಳ ಮೇಲೂ ಸುಮಾರು 10 ರಿಂದ 20 ರೂ.ವರೆಗೂ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮೊದಲ ವಾರವೇ ಹೊಸ ದರಗಳು ಪರಿಷ್ಕರಣೆಗೊಳ್ಳುವ ಸಾಧ್ಯತೆ ಇದೆ.ಇದನ್ನೂ ಓದಿ: PUBLiC TV Impact | ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಮಹಿಳಾ ಆಯೋಗ ಪತ್ರ

Share This Article