ಗ್ರಾಹಕರಿಗೆ ಮತ್ತೊಂದು ಶಾಕ್ – ಕಣ್ಣಲ್ಲಿ ನೀರು ತರಿಸುತ್ತಿದೆ ಈರುಳ್ಳಿ ದರ

Public TV
1 Min Read

ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ (Onion) ದರ ದಿಢೀರ್ ಏರಿಕೆಯಾಗಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ.

ಕಳೆದ ವಾರ ಕೆ.ಜಿಗೆ 50ರಿಂದ 60 ರೂ.ಯಿದ್ದ ಈರುಳ್ಳಿ ಬೆಲೆ ಇದೀಗ ದಿಢೀರ್ ಹೆಚ್ಚಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದೆ.ಇದನ್ನೂ ಓದಿ: ‘ಯುಐ’ ಸಿನಿಮಾ ಸೈಕಾಲಜಿಕಲ್ ಕಲ್ಕಿ ಎಂದು ಬಣ್ಣಿಸಿದ ಉಪೇಂದ್ರ

ರಾಜ್ಯದಲ್ಲಿ ಹೆಚ್ಚು ಮಳೆಯಾಗಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಆದ್ದರಿಂದ ಪೂರೈಕೆಗಿಂತ ಬೇಡಿಕೆ ಪ್ರಮಾಣ ಹೆಚ್ಚಾಗಿ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿದೆ.

ಈ ಹಿಂದೆ ಉತ್ತರ ಕರ್ನಾಟಕ (North Karnataka) ಭಾಗದಿಂದ ಈರುಳ್ಳಿ ರಾಜ್ಯಕ್ಕೆ ಪೂರೈಕೆಯಾಗುತ್ತಿತ್ತು. ಆದರೀಗ ಉತ್ತರ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಿದ್ದು, ಮಳೆಗೆ ಈರುಳ್ಳಿ ಕೊಳೆತು ಹೋಗುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ.

ಸದ್ಯ ರಾಜ್ಯಕ್ಕೆ ಪುಣೆ (Pune), ಮಹಾರಾಷ್ಟ್ರದಿಂದ (Maharashtra) ಈರುಳ್ಳಿ ಪೂರೈಕೆಯಾಗುತ್ತಿದ್ದು, ದಸರಾ ಉತ್ಸವದ ವೇಳೆಗೆ ಈರುಳ್ಳಿ ದರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜೊತೆಗೆ ಈಗಾಗಲೇ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರವು 400 ರೂ. ಗಡಿದಾಟಿದ್ದು, ಇದೀಗ ಈರುಳ್ಳಿ ದರ ಏರಿಕೆಯು ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ.ಇದನ್ನೂ ಓದಿ: HSRP ನಂಬರ್‌ ಪ್ಲೇಟ್‌ ಅಳವಡಿಕೆ – ನ.20 ರವರೆಗೆ ಅವಧಿ ವಿಸ್ತರಣೆ

 

Share This Article