ತಾಯಿ ಓದುವಂತೆ ಒತ್ತಾಯಿಸುತ್ತಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ – 2 ವಾರಗಳಲ್ಲಿ 3ನೇ ಸಾವು

Public TV
2 Min Read

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಎರಡು ವಾರಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ 3ನೇ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣ ಇದಾಗಿದೆ.

ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲಿ ಭಾರತ ಹೊರತು ಪಡಿಸಿ 13 ದೇಶಗಳಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ

crime

ತನಿಖೆ ವೇಳೆ ಬಾಲಕಿಯ ಡೆತ್‌ನೋಟ್ ಪತ್ತೆಯಾಗಿದ್ದು, ಆಕೆಯ ಪೋಷಕರು ಐಎಎಸ್ ಪ್ರವೇಶ ಪರೀಕ್ಷೆಯಲ್ಲಿ ಮಗಳು ತೇರ್ಗಡೆಯಾಗಬೇಕು ಎಂದು ಬಯಸಿದ್ದರು. ಇದರಿಂದ ಆಕೆಗೆ ಅಪಾರ ಒತ್ತಡವಾಗಿತ್ತು. ತಾಯಿ ಓದುವಂತೆ ಗದರಿಸುತ್ತಿದ್ದರಿಂದ ಬಾಲಕಿ ಮನನೊಂದು ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹದಿಹರೆಯದ ವಿದ್ಯಾರ್ಥಿಗಳ ಸಾವಿನಿಂದ ಕಳವಳ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಆತ್ಮಹತ್ಯೆಯ ಆಲೋಚನೆಗಳಿಂದ ದೂರವಿಡುವಂತೆ ಯುವಜನತೆಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಶಿ ತಿರುಗೇಟು

Crime-Scene

ವಸತಿ ಶಾಲೆಯಲ್ಲಿ 2ನೇ ಆತ್ಮಹತ್ಯೆ: ತಮಿಳುನಾಡಿನ ಚಿನ್ನಸೇಲಂನ ಕಣಿಯೂರು ಪ್ರದೇಶದ ಖಾಸಗಿ ವಸತಿ ಶಾಲೆಯಲ್ಲಿ 2 ವಾರಗಳ ಹಿಂದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಆತ್ಮಹತ್ಯೆಯಿಂದಾಗಿ ಶಾಲೆಯ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿದ್ದವು. ಆ ಘಟನೆ ಮಾಸುವುದಕ್ಕೂ ಮೊದಲೇ ಇನ್ನೊಂದು ವಿದ್ಯಾರ್ಥಿನಿ ನಿನ್ನೆ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿತ್ತು.

ತಮಿಳುನಾಡಿನ ತಿರುವಳ್ಳೂರು ಜಿಲ್ಲೆ, ಕಿಲಚೇರಿ ಬಳಿಯ ಸರ್ಕಾರಿ ಅನುದಾನಿತ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಹಾಸ್ಟೆಲ್‌ನಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಳು. ಘಟನೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ವಿದ್ಯಾರ್ಥಿನಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ಹಾಗೂ ಸಂಬಂಧಿಕರು ಶಾಲೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆ ನಡೆದ ಪ್ರದೇಶದಲ್ಲಿ ಹಿಂಸಾಚಾರ ನಡೆಯದಂತೆ ಪೊಲೀಸರು ಎಚ್ಚರ ವಹಿಸಿದ್ದಾರೆ.

ಈ ಘಟನೆ ಸಂಭವಿಸಿದ ಮರುದಿನವೇ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *