ಕಾಂಗ್ರೆಸ್ ವಿರುದ್ಧ ಆಡಳಿತ ವಿರೋಧಿ ಅಲೆ; ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ವಿಜಯೇಂದ್ರ

2 Min Read

ಬೆಂಗಳೂರು: ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಅಂತ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ನೋಡಿದ್ದೇವೆ. ಎಲ್ಲಾ ಕಡೆ ಬಿಜೆಪಿ ಗೆದ್ದು ಬೀಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನಾಚರಣೆ ಆಚರಿಸಲಾಯಿತು. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಜಗದೀಶ್ ಶೆಟ್ಟರ್, ಪರಿಷತ್ ಸಚೇತಕ ರವಿಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ರು. ವಾಜಪೇಯಿಯವರ ಭಾವಚಿತ್ರಕ್ಕೆ ಹಾರ ಹಾಕಿ ನಮನ ಸಲ್ಲಿಸಲಾಯಿತು. ನಾಯಕರು ವಾಜಪೇಯಿ ವ್ಯಕ್ತಿತ್ವ, ಕಾರ್ಯಕ್ರಮಗಳ ಗುಣಗಾನ ಮಾಡಿದರು. ಇದನ್ನೂ ಓದಿ: ಮಂತ್ರಾಲಯದಲ್ಲಿ ಕಿಕ್ಕಿರಿದ ಜನಸಾಗರ – ಒಂದೇ ದಿನ ಹರಿದುಬಂದ ಲಕ್ಷಾಂತರ ಭಕ್ತಗಣ

ಈ ವೇಳೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಅಟಲ್ ಅವರ ಹೆಸರನ್ನು ಕೇಳಿದಾಗ ನಮಗೆ ರಣೋತ್ಸಾಹ ಬರುತ್ತದೆ. ಅವರದ್ದು ಶ್ರೇಷ್ಠ ವ್ಯಕ್ತಿತ್ವ. ವಾಜಪೇಯಿ ಅವರಿಗೆ ಕರ್ನಾಟಕಕ್ಕೆ ಅವಿನಾಭಾವ ಸಂಬಂಧ ಇದೆ. ಹಲವು ಬಾರಿ ಕರ್ನಾಟಕ ಪ್ರವಾಸ ಮಾಡಿ ರಾಜ್ಯ ಬಿಜೆಪಿ ಹಿರಿಯ ನಾಯಕರಿಗೆ ಪ್ರೇರಣೆ ನೀಡಿದ್ರು ಎಂದರು. ಇದನ್ನೂ ಓದಿ: ಬೆಂಗಳೂರಿಂದ ವಿಜಯಪುರಕ್ಕೆ ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಪ್ರಪ್ರಥಮ ವಿಶೇಷ ರೈಲು

ಇನ್ನು ಕಾಂಗ್ರೆಸ್ ಅವರಿಗೆ ಮೊದಲಿನಿಂದಲೂ ಲೂಟಿ ಮಾಡೋದು ಬಿಟ್ಟು ಬೇರೇನು ಗೊತ್ತಿಲ್ಲ. ಬಿಜೆಪಿ ಅಲ್ಪಸಂಖ್ಯಾತ ವಿರೋಧಿ ಅಂತ ಕಾಂಗ್ರೆಸ್ ಅವರು ಹೇಳ್ತಾರೆ. ಮೋದಿ, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಅಲ್ಲ. ಯಾರು ಪಾಕಿಸ್ತಾನ ಜಿಂದಾಬಾದ್ ಅಂತಾರೊ ಅವರ ವಿರೋಧಿ. ವೋಟ್ ಚೋರಿ ಅಂತ ಕಾಂಗ್ರೆಸ್ ಅವರು ಏನೇ ಆರೋಪ ಮಾಡ್ಲಿ ಆದ್ರೆ 11 ವರ್ಷಗಳ ಮೋದಿ ಆಡಳಿತದಲ್ಲಿ ಯಾವುದೇ ವಿಪಕ್ಷ ಕೂಡ ಕೇಂದ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಲು ಆಗಿಲ್ಲ. ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ತಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಆಂತರಿಕ ಕಚ್ಚಾಟ ಕಾಂಗ್ರೆಸ್‌ ಹೈಕಮಾಂಡ್ ಸರಿಪಡಿಸಲಿ: ಸತೀಶ್‌ ಜಾರಕಿಹೊಳಿ

ಬ್ಯಾಲೆಟ್, ಇವಿಎಂ ಏನೇ ಬಂದರೂ ಕಾಂಗ್ರೆಸ್ ಹಣೆಬರಹ ಬದಲಾಗಲ್ಲ. ಮುಂದೆ ಪಶ್ಚಿಮ ಬಂಗಾಳದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವ ವಾತಾವರಣ ನಿರ್ಮಾಣ ಆಗಿದೆ. ರಾಜ್ಯದಲ್ಲಿ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿದ್ದೇವೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 130ಕ್ಕು ಹೆಚ್ಚು ಕ್ಷೇತ್ರಗಳಲ್ಲಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಉದ್ವಿಗ್ನತೆ ಸಾಧ್ಯತೆ – ಚೀನಾದ ಸಿಕ್ರೇಟ್ ಮಿಷನ್ ಬಹಿರಂಗಗೊಳಿಸಿದ ಯುಎಸ್‌ನ ಪೆಂಟಾಗನ್ ವರದಿ

Share This Article