ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ ದೇಶ ವಿರೋಧಿ ಚಿಂತನೆ – ಬಿಜೆಪಿ ಸಂಸದ ಅಲ್ಫೋನ್ಸ್ ಹೇಳಿಕೆ

Public TV
1 Min Read

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚಾಗುತ್ತಿದೆ. ಇಲ್ಲಿನ ಕೆಲ ಜಿಲ್ಲೆಗಳು ಸೌದಿ ಅರೇಬಿಯಾದಂತೆ ಭಾಸವಾಗುತ್ತಿದ್ದು, ದೇಶ ವಿರೋಧಿ ಚಿಂತನೆಗಳು ವ್ಯಾಪಕವಾಗಿ ಹರಡುತ್ತಿವೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಬಿಜೆಪಿ ರಾಜ್ಯಸಭಾ ಸಂಸದ ಕೆ.ಜೆ. ಅಲ್ಫೋನ್ಸ್ ಕಣ್ಣಂತಾನಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಇಸ್ಲಾಂ ಧರ್ಮದ ಕಡೆಗೆ ಜನರ ಒಲವು ಹೆಚ್ಚುತ್ತಿದೆ. ಇದು ಅತ್ಯಂತ ದುಃಖಕರ ಸಂಗತಿ. ನೀವು ಕೇರಳದ ಕೆಲವು ಜಿಲ್ಲೆಗಳಿಗೆ ಹೋಗಿ ನೋಡಿದರೆ, ಸೌದಿ ಅರೇಬಿಯಾದಲ್ಲಿದ್ದಂತೆ ಭಾಸವಾಗುತ್ತದೆ. ಜನರ ವರ್ತನೆಗಳಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದಾಗಿದೆ. ವಿಶೇಷವಾಗಿ ಅವರು ಧರಿಸುವ ಉಡುಪು ದೇಶ ವಿರೋಧಿ ಚಿಂತನೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

ಇದೇ ವೇಳೆ ಪ್ರಚೋದನಕಾರಿ ಘೋಷಣೆಗಳಿಗೆ ಸಂಬಂಧಿಸಿದಂತೆ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪೊಲೀಸರಿಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಉತ್ತಮ ಬೆಳವಣಿಗೆ ಎಂದು ಅಲ್ಫೋನ್ಸ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ಸರ್ಕಾರಗಳು ಮುಸ್ಲಿಮರ ಮತಗಳ ಮೇಲೆ ಅವಲಂಬಿತವಾಗಿವೆ. ಈ ನಡುವೆ ಕೇರಳದಲ್ಲಿ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳು ಅಲ್ಪಸಂಖ್ಯಾತರನ್ನು ಭಯೋತ್ಪಾದನಾ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *