ಹಾಟ್ ಆದ ‘ಪ್ರೇಮಂ’ ಬೆಡಗಿ- ಅಭಿಮಾನಿಗಳು ಅಸಮಾಧಾನ

Public TV
2 Min Read

ಸೌತ್ ನಟಿ ಅನುಪಮಾ ಪರಮೇಶ್ವರನ್ (Anupama Parameshwaran) ಅವರು ಇತ್ತೀಚಿನ ದಿನಗಳಲ್ಲಿ ಸಿಕ್ಕಾಪಟ್ಟೆ ಹಾಟ್ ಆಗಿ ಕಾಣಿಸಿಕೊಳ್ತಿದ್ದಾರೆ. ಪಕ್ಕದ್ಮನೆ ಹುಡುಗಿಯಂತಿದ್ದ ಅನುಪಮಾ ಈಗ ಸಖತ್ ಬೋಲ್ಡ್ ಆಗಿದ್ದಾರೆ. ‘ಟಿಲ್ಲು ಸ್ಕ್ವೇರ್‌’ ನಲ್ಲಿಯೂ (Tillu 2) ಹಸಿಬಿಸಿ ದೃಶ್ಯಗಳಲ್ಲಿ ನಟಿಸಿದ್ದಾರೆ. ಅನುಪಮಾ ಅವತಾರ ನೋಡಿ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.

ಹೀರೋ ಸಿದ್ದು ಜೊತೆ ಅನುಪಮಾ ‘ಟಿಲ್ಲು 2’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಲಿಪ್‌ಲಾಕ್ ಸೀನ್‌ಗಳಲ್ಲಿ ಪ್ರೇಮಂ ಬೆಡಗಿ ನಟಿಸಿದ್ದಾರೆ. ಚಿತ್ರದ ಟ್ರೈಲರ್ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಇದರ ನಡುವೆ ವೆಕೇಷನ್ ಮೂಡ್‌ನಲ್ಲಿರುವ ಅನುಪಮಾ, ಅಲ್ಲಿಯೂ ಕೂಡ ಹಾಟ್ ಆಗಿ ಕಾಣಿಕೊಂಡಿದ್ದಾರೆ. ಈ ಕುರಿತ ವಿಡಿಯೋಗಳನ್ನು ನಟಿ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಕುಟುಕಿದ ಜಗ್ಗೇಶ್‌ಗೆ ಕಾಲಾಯ ತಸ್ಮೈ ನಮಃ ಎಂದ ವರ್ತೂರು ಸಂತೋಷ್‌

ಅನುಪಮಾ ವೆಕೇಷನ್ ವಿಡಿಯೋ ಶೇರ್ ಮಾಡ್ತಿದ್ದಂತೆ ಅಭಿಮಾನಿಗಳು, ನಿಮ್ಮಿಂದ ಈ ರೀತಿಯ ವರ್ತನೆಯನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ನಿಮ್ಮ ಅವತಾರ ಬ್ರೇಕಪ್‌ಗಿಂತಲೂ ಹೆಚ್ಚು ನೋವುಂಟು ಮಾಡುತ್ತಿದೆ ಎಂದು ನಟಿಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬೋಲ್ಡ್ ಪಾತ್ರಗಳಲ್ಲಿ ಮಾಡಲ್ಲ ಅಂತಿದ್ದ ಈ ನಟಿ ‘ಟಿಲ್ಲು ಸ್ಕ್ವೇರ್‌’ ಸಿನಿಮಾದಲ್ಲಿ ಬೋಲ್ಡ್ ಆಗಿ ನಟಿಸಿದ್ದಾರೆ. ಈ ಹಿಂದೆ ‘ರೌಡಿ ಬಾಯ್ಸ್’ ಸಿನಿಮಾದಲ್ಲಿ ಈ ರೀತಿಯ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರೂ, ಅಭಿಮಾನಿಗಳಿಗೆ ಅಷ್ಟೇನೂ ಅವು ಮತ್ತೇರಿಸಿರಲಿಲ್ಲ.

ಟಿಲ್ಲು ಸ್ಕ್ವೇರ್ ಸ್ವೀಕೆಲ್ ಸಿನಿಮಾ. ಈ ಹಿಂದೆ 2022ರಲ್ಲಿ ಬಿಡುಗಡೆಯಾಗಿದ್ದ ‘ಡಿಜೆ ಟಿಲ್ಲು’ ಸಿನಿಮಾದ ಮುಂದುವರೆದ ಭಾಗ ಇದಾಗಿದೆ. ‘ಟಿಲ್ಲು ಸ್ಕ್ವೇರ್‌’ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಅನುಪಮಾ ಅಚ್ಚರಿ ಎನ್ನುವಂತೆ ಬೋಲ್ಡ್ ಸ್ಟೆಪ್ ಇಟ್ಟಿದ್ದಾರೆ. ಈ ಸಿನಿಮಾವನ್ನು ಮಲ್ಲಿಕ್ ರಾಮ್ ನಿರ್ದೇಶನ ಮಾಡಿದ್ದು, ಸೂರ್ಯದೇವರ ನಾಗ್ ವಂಶಿ ನಿರ್ಮಾಣ ಮಾಡಿದ್ದಾರೆ.

ಅನುಪಮಾ ಈ ಹಿಂದೆ ‘ಈಗಲ್’ ಸಿನಿಮಾದಲ್ಲಿ ನಟಿಸಿದ್ದರು. ಆ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಬೆನ್ನಲ್ಲೆ ‘ಟಿಲ್ಲು ಸ್ಕ್ವೇರ್’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 29ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ.

ಅಂದಹಾಗೆ, ನಟಿ ಅನುಪಮಾ ಅವರು ಕನ್ನಡ ಸಿನಿಮಾದಲ್ಲಿಯೂ ನಟಿಸಿದ್ದಾರೆ. ‘ನಟಸಾರ್ವಭೌಮ’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್‌ಗೆ ಹೀರೋಯಿನ್ ಆಗಿ ನಟಿಸಿದ್ದರು.

Share This Article