ವಿಶೇಷ ವಿಕಲಚೇತನ ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ

Public TV
1 Min Read

ಯಾದಗಿರಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ವಿಶೇಷ ವಿಕಲಚೇತನ ಅಭಿಮಾನಿಯಿಂದ ಅವರ ಸಮಾಧಿ ದರ್ಶನ ಪಡೆಯಲು ಯಾದಗಿರಿಯಿಂದ ಬೆಂಗಳೂರಿಗೆ ಪಾದಯಾತ್ರೆ ಬೆಳೆಸಿದ್ದಾರೆ.

ನಗರದ ವಡಿಗೇರಾ ತಾಲೂಕಿನ ಐಕೂರ್ ಗ್ರಾಮದ ವಿಶೇಷ ವಿಕಲಚೇತನ ರವಿಕುಮಾರ್ ಎಂಬುವವರು ಈ ಪಾದಯಾತ್ರೆ ಕೈಗೊಂಡಿದ್ದಾರೆ. ರವಿಯವರು ನಟ ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದಾರೆ. ಅಪ್ಪು ಸಮಾಧಿ ದರ್ಶನ ಪಡೆಯಲು ಸುಮಾರು 500 ಕಿ.ಮೀ ಪ್ರಯಾಣ ಬೆಳೆಸಲಿದ್ದಾರೆ. ಅಭಿಮಾನಿಯು ಅಪ್ಪು ಪೋಟೋ ಕೈಯಲ್ಲಿ ಹಿಡಿದುಕೊಂಡು ಪಾದಯಾತ್ರೆ ಹೊರಟಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುನೀತ್ ಬದುಕಿದ್ದಾಗ ಭೇಟಿಯಾಗಲು ಆಗಿರಲಿಲ್ಲ. ಹಾಗಾಗಿ ಅವರ ಸಮಾಧಿಗೆ ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋಗುತ್ತೇನೆ. ಅವರ ಆದರ್ಶ ಜೀವನ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು. ಇದನ್ನೂ ಓದಿ: ನಟಿ ಅಮೃತಾ ನಾಯ್ಡು ಬಾಳಲ್ಲಿ ಪದೇ ಪದೇ ವಿಧಿಯಾಟ

ಪುನೀತ್ ರಾಜ್ ಕುಮಾರ್ ಅವರ ವ್ಯಕ್ತಿತ್ವ ಮತ್ತು ಸಹಾಯ ಮಾಡುವ ಗುಣ ಮೆಚ್ಚುವಂತದ್ದು, ಅವರು 100 ವರ್ಷ ಕಾಲ ಬಾಳಿ ಬದುಕಬೇಕಾಗಿತ್ತು. ಅವರ ಅಕಾಲಿಕ ಮರಣ ನನಗೆ ಬಹಳ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *