ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಆಸ್ಪತ್ರೆಗೆ ದಾಖಲು

By
1 Min Read

ಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ (A.R.Rahman) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ನಂತರ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೆಹಮಾನ್ (58) ಅವರನ್ನು ಬೆಳಗ್ಗೆ 7:30 ಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಅವರು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ‘ಚಾವಾ’ ಸಿನಿಮಾದ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ, ರೆಹಮಾನ್ ಅವರ ಮಾಜಿ ಪತ್ನಿ ಸೈರಾ ಬಾನು ಕೂಡ ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಸುದ್ದಿಯನ್ನು ಅವರ ವಕೀಲೆ ವಂದನಾ ಶಾ ಅಧಿಕೃತ ಹೇಳಿಕೆಯ ಮೂಲಕ ಹಂಚಿಕೊಂಡಿದ್ದಾರೆ.

ಸುಮಾರು 29 ವರ್ಷಗಳ ದಾಂಪತ್ಯಕ್ಕೆ ಕಳೆದ ವರ್ಷ ನವೆಂಬರ್‌ನಲ್ಲಿ ಸೈರಾ ಬಾನು ಮತ್ತು ಎಆರ್ ರೆಹಮಾನ್ ಅಂತ್ಯ ಹಾಡಿದ್ದರು. ಇಬ್ಬರೂ ಡಿವೋರ್ಸ್‌ ಪಡೆದಿದ್ದರು.

Share This Article