ಲಾಠಿ ಚಾರ್ಜ್ ಪ್ರಕರಣ ಸಿಐಡಿಗೆ ಒಪ್ಪಿಸುತ್ತೇನೆ: ಆರಗ ಜ್ಞಾನೇಂದ್ರ

Public TV
2 Min Read

ಉಡುಪಿ: ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್ ಲಾಠಿ ಚಾರ್ಜ್ ಮಾಡಿರುವ ಪ್ರಕರಣವನ್ನು ಸಿಐಡಿಗೆ ಒಪ್ಪಿಸುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಕೋಟತಟ್ಟು ಗ್ರಾಮಕ್ಕೆ ಭೇಟಿ ನೀಡಿದ ಅವರು, ಪ್ರಕರಣದ ಕುರಿತು ಸಿಐಡಿ ಸಂಸ್ಥೆಯ ಮೂಲಕ ಸಮಗ್ರ ತನಿಖೆ ಮಾಡುತ್ತೇವೆ. ಪೊಲೀಸ್ ಪ್ರತಿ ದೂರಿನ ಬಗ್ಗೆ ಚರ್ಚೆ ಮಾಡುತ್ತೇವೆ. ಸಂತ್ರಸ್ತ ಸಮುದಾಯಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

araga jnanendra

ಎರಡು ದಿನ ಸುಮ್ಮನಿದ್ದ ಪೊಲೀಸ್ ಕಾನ್‌ಸ್ಟೇಬಲ್ ಮೂರನೇ ದಿನ ಕೇಸು ಮಾಡಿದ್ದಾನೆ. ಸರ್ಕಾರಿ ನೌಕರಿಗೆ ಅಡ್ಡಿ ಎಂದು ಪ್ರತಿ ದೂರು ನೀಡಿದ್ದಾರೆ. ಇದು ಮೇಲ್ನೋಟಕ್ಕೆ ಸುಳ್ಳು ಕೇಸ್ ಎಂದು ಎಲ್ಲರಿಗೂ ಗೊತ್ತಾಗುತ್ತದೆ. ಈ ರೀತಿ ಒಬ್ಬ ಪೋಲೀಸ್ ಸುಳ್ಳು ಕೇಸು ಕೊಡಬಾರದು. ಇದು ಬಹಳ ದೊಡ್ಡ ಅಪರಾಧ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಹೊರಟಿದ್ದಾರೆ: ಶ್ರೀರಾಮುಲು

ಸಾಮಾನ್ಯ ಜನ ಇದನ್ನೆಲ್ಲ ಮಾಡುತ್ತಾರೆ ನಿಜ. ಆದರೆ ಒಬ್ಬ ಪೊಲೀಸ್ ಈ ಕೆಲಸ ಮಾಡಬಾರದಿತ್ತು. ಕೋಟ ಎಸ್‌ಐ ಮೇಲಧಿಕಾರಿಗಳಿಗೆ ಮಾಹಿತಿ ನೀಡಿಲ್ಲ. ಮನುಷ್ಯತ್ವವನ್ನೇ ಕಳೆದುಕೊಂಡು ಹಲ್ಲೆ ಮಾಡಿದ್ದಾರೆ. ರೌಡಿಗಳನ್ನು ಕಂಟ್ರೋಲ್ ಮಾಡಲು ಪೊಲೀಸ್ ನೇಮಕ ಮಾಡುತ್ತೇವೆ. ಪೊಲೀಸರೇ ರೌಡಿ ಕೆಲಸ ಮಾಡಿದರೆ ತಡೆಯೋರು ಯಾರು ಎಂದ ಅವರು, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವ ಕೆಲಸ ಮಾಡಿದ್ದಾರೆ. ಹತ್ತು ಲಕ್ಷ ಪೊಲೀಸ್ ಸಿಬ್ಬಂದಿ ಇದ್ದಾರೆ. ಇಂಥ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಅವಮಾನ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ದೇವಸ್ಥಾನಗಳಿಗೆ ಸ್ವತಂತ್ರ ಕೊಟ್ಟರೆ ಇವರಿಗೇಕೆ ಉರಿ – ಡಿಕೆಶಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

ನಮ್ಮಲ್ಲಿ ಕೆಟ್ಟವರಿಲ್ಲ ಅಂತ ನಾನು ಸಮರ್ಥನೆ ಮಾಡಿಕೊಳ್ಳಲು ಹೋಗೋದಿಲ್ಲ. ಆದರೆ ಒಳ್ಳೆಯ ಹಾಗೂ ದಕ್ಷ ಪೊಲೀಸ್ ಅಧಿಕಾರಿಗಳು ಇದ್ದಾರೆ. ತಪ್ಪು ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು. ಇದನ್ನೂ ಓದಿ: PM ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685 ಕೋಟಿ ರೂ.ಗೂ ಹೆಚ್ಚಿನ ಹಣ ಬಿಡುಗಡೆ

ರಾಜ್ಯ ಸರ್ಕಾರ ಕೊರಗ ಕುಟುಂಬದ ಜೊತೆ ಇದೆ ಎಂದ ಅವರು, ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡುತ್ತೇವೆ ಎಂದ ಅವರು, ಈಗಾಗಲೇ ಸಂತ್ರಸ್ತರ 6 ಕುಟುಂಬಕ್ಕೆ 50 ಸಾವಿರ ಚೆಕ್ ಹಸ್ತಾಂತರಿಸಿದರು. ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಸಚಿವ ಕೋಟ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *