ಕೋವಿಡ್ ತಡೆಗೆ ಸರ್ಕಾರ ವಿಶೇಷ ಗಮನ ಹರಿಸಿದೆ: ಆರಗ ಜ್ಞಾನೇಂದ್ರ

Public TV
1 Min Read

ಶಿವಮೊಗ್ಗ: ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಇದನ್ನು ತಡೆಯಲು ಸರ್ಕಾರ ವಿಶೇಷ ಗಮನ ಹರಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯನ್ನು ಉದಾಸೀನ ಮಾಡಿದ್ದಕ್ಕೆ ಹಲವರು ಮೃತಪಟ್ಟರುವ ಉದಾಹರಣೆ ಕಣ್ಣೆದುರಿಗೆ ಇದೆ. ಇದು ಮರುಕಳಿಸದಂತೆ ನೋಡಿಕೊಳ್ಳಲು ತಜ್ಞರ ಜೊತೆ ಸಭೆಯಲ್ಲಿ ಚರ್ಚಿಸಿ ನಂತರ ಕ್ರಮ ಕೈಗೊಂಡಿದ್ದೇವೆ ಎಂದರು.

ಕೋವಿಡ್ ನಡುವೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ತಜ್ಞರ ಸಲಹೆಯಂತೆ ಸರ್ಕಾರ ಕೋವಿಡ್ ನಿಯಮ ಜಾರಿಗೊಳಿಸಿದೆ. ಇಂತಹ ವಿಷಯದಲ್ಲೂ ರಾಜಕಾರಣ ಹುಡುಕುತ್ತೇವೆ ಎಂದರೆ ಏನನ್ನೂ ಹೇಳಲು ಸಾಧ್ಯವಿಲ್ಲ. ಮೂರನೇ ಅಲೆಯನ್ನು ತಡೆಯಲು ಸರ್ಕಾರದ ನಿಯಮಗಳು ಏನಿದೆಯೋ ಅದನ್ನು ಪಾಲಿಸಬೇಕಾದದ್ದು, ನಮ್ಮ ಕರ್ತವ್ಯ ಎಂದು ತಿಳಿಸಿದರು. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

ರಾಮನಗರದಲ್ಲಿ ಸಂಸದ ಡಿ.ಕೆ.ಸುರೇಶ್, ಸಚಿವ ಅಶ್ವಥ್ ನಾರಾಯಣ್ ಜಟಾಪಟಿ ವಿಚಾರವಾಗಿ ಮಾತನಾಡಿದ ಅವರು, ಯಾವಾಗಲೂ ಬುದ್ಧಿ ಬಲದ ಮೇಲೆ ರಾಜಕಾರಣ ಮಾಡಬೇಕು. ತೋಳು ಬಲದ ಮೇಲೆ ರಾಜಕಾರಣ ಮಾಡುವವರಿಗೆ ಏನು ಹೇಳುವುದಕ್ಕೆ ಆಗುತ್ತದೆ. ರಾಜಕಾರಣದ ಅವನತಿಯ ದಿನಗಳು, ಬಹಳ ಬೇಗ ಬಿದ್ದು ಹೋಗುತ್ತವೆ. ಸಚಿವರೇ ಹೋಗಿ ಕರೆಯುವುದಕ್ಕೆ ಇಂತಹ ಕಾರ್ಯಕ್ರಮಗಳು ಮದುವೆ ಮನೆನಾ ಎಂದು ಪ್ರಶ್ನಿಸಿದ ಅವರು, ಕಾರ್ಯಕ್ರಮಕ್ಕೆ ಅಧಿಕಾರಿಗಳು ಇನ್ವಿಟೇಷನ್ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  ಓಮಿಕ್ರಾನ್ ಶ್ವಾಸಕೋಶಕ್ಕೆ ಹೋಗಲ್ಲ, ಗಂಟಲಲ್ಲಿ ಮಾತ್ರ ಇರುತ್ತೆ: ಸುಧಾಕರ್

 

Share This Article
Leave a Comment

Leave a Reply

Your email address will not be published. Required fields are marked *