ಬೆಂಗಳೂರು: ಬಿಗ್‍ಬಾಸ್ ಸೀಸನ್-8ರಲ್ಲಿ ಪ್ರಣಯ ಪಕ್ಷಿಗಳತ್ತಿದ್ದ ಜೋಡಿ ಅಂದರೆ ಅರವಿಂದ್ ಹಾಗೂ ದಿವ್ಯಾ ಉರುಡುಗ. ಬಿಗ್‍ಬಾಸ್ ಕಾರ್ಯಕ್ರಮದ ನಂತರ ಎಲ್ಲೂ ಅಷ್ಟಾಗಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳದೇ ಇದ್ದರೂ, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಅರವಿಂದ್ ಕೆಪಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು ದಿವ್ಯಾ ಉರುಡುಗ ಕಾಮೆಂಟ್ ಮಾಡಿದ್ದಾರೆ.
ಹೌದು ಅರವಿಂದ್ ಕಪ್ಪು ಶ್ವಾನವೊಂದರ ಜೊತೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋ ಜೊತೆಗೆ ಬೆನ್ನಟ್ಟಬೇಡಿ ಆದರೆ ಆಕರ್ಷಿಸಿ. ನಿಮ್ಮದಾಗಿರುವುದು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ. ಶುಭವಾರ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ವಿಶೇಷವೆಂದರೆ ಈ ಫೋಟೋಗೆ ದಿವ್ಯಾ ಉರುಡುಗ ಕ್ಯೂಟ್ ಎಂದು ಕಾಮೆಂಟ್ ಮಾಡುವುದರ ಜೊತೆಗೆ ಹಾರ್ಟ್ ಎಮೋಜಿ ಕಳುಹಿಸಿದ್ದಾರೆ. ಇದನ್ನೂ ಓದಿ: ದಿವ್ಯಾ ಉರುಡುಗ ಹೇರ್ ಕಟ್ ಮಾಡಿದ ಅರವಿಂದ್
View this post on Instagram
ಬಿಗ್‍ಬಾಸ್ ಮನೆಯ ಕ್ಯೂಟ್ ಕಪಲ್ ಆಗಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಪ್ರೇಕ್ಷಕರ ಮನಗೆದ್ದಿದ್ದರು. ಇನ್ನೂ ಈ ಜೋಡಿಗೆ ಸೋಶಿಯಲ್ ಮೀಡಿಯಾದಲ್ಲಿ ಅಪಾರವಾದ ಅಭಿಮಾನಿ ಬಳಗ ಹೊಂದಿದ್ದಾರೆ. ಅಲ್ಲದೇ ಇವರಿಬ್ಬರ ನಡುವೆ ಲವ್ವಿ-ಡವ್ವಿ ಶುರುವಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸದ್ಯ ದಿವ್ಯಾ ಹಾಗೂ ಅರವಿಂದ್ ಮಾತ್ರ ಯಾವುದೇ ಗುಟ್ಟು ಬಿಟ್ಟು ಕೊಡದೇ ತಮ್ಮ, ತಮ್ಮ ಲೈಫ್‍ನಲ್ಲಿ ಬ್ಯೂಸಿಯಾಗಿದ್ದಾರೆ. ಇದನ್ನೂ ಓದಿ: ನಿಮ್ಮ ಪ್ರತಿ ಮಾತು ನನ್ನನ್ನು ಪ್ರತಿನಿಧಿಸುತ್ತದೆ – ಅಭಿಮಾನಿಗಳಲ್ಲಿ ಅರವಿಂದ್ ಮನವಿ

 
			
 
		 
		 
                                
                              
		