ಕುಡಿತಕ್ಕೆ ದಾಸನಾಗಿದ್ದ ಪತಿಯೊಂದಿಗೆ ಗಲಾಟೆ – ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Public TV
1 Min Read

ನೆಲಮಂಗಲ: ಗಂಡ- ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತಿನಂತೆ ಹೆತ್ತ ತಾಯಿ (Mother) ಮನನೊಂದು ಐದು ವರ್ಷದ ತನ್ನ ಮಗುವನ್ನ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ನೆಲಮಂಗಲ (Nelamangala) ಪೊಲೀಸ್ ಉಪವಿಭಾಗದ ಬೆಂಗಳೂರು ಉತ್ತರ ತಾಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

5 ವರ್ಷ ಸಿರಿ ಕೊಲೆಯಾದ ಮಗು. ಜಯರಾಂ ಹಾಗೂ ಮಹಾಲಕ್ಷ್ಮಿ 8 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ವರ್ಷದಿಂದ ಕೆಲಸವಿಲ್ಲದೆ ಕುಡಿತಕ್ಕೆ ದಾಸನಾಗಿದ್ದ ಜಯರಾಂ, ಕೆಲಸಕ್ಕೆ ಹೋಗದೆ ಮನೆಯಲ್ಲಿ ಇದ್ದ. ಮನೆಯಲ್ಲಿ ಆಗಾಗ ಗಂಡ-ಹೆಂಡತಿ ನಡುವೆ ಜಗಳ ನಡೆದು ಬುಧವಾರ ಇಬ್ಬರ ನಡುವೆ ಜಗಳ ತಾರಕಕ್ಕೇರಿದೆ. ಬಳಿಕ ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಮಹಾಲಕ್ಷ್ಮಿ ಮಗುವಿನ ಕತ್ತು ಹಿಸುಕಿ ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.  ಇದನ್ನೂ ಓದಿ: ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು

ಕೂಡಲೇ ಮನೆಯವರು ಡೋರ್ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ತಾಯಿ ಮಹಾಲಕ್ಷ್ಮಿಯನ್ನ ರಕ್ಷಣೆ ಮಾಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್‌ಪಿ ಡಾ.ವೆಂಕಟೇಶ್ ಪ್ರಸನ್ನ, ಸಿಪಿಐ ಮುರಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಸಂಬಂಧ ಪತಿ ಜಯರಾಮ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ | RCB ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲು ಕ್ಯಾಬಿನೆಟ್‌ ಒಪ್ಪಿಗೆ

Share This Article