ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

Public TV
1 Min Read

ಛತ್ತೀಸಗಢ: ಪಂಜಾಬ್‌ನ (Punjab) ಪಠಾಣ್‌ಕೋಟ್ ಜಿಲ್ಲೆಯ ಮಾಧೋಪುರ್ ಹೆಡ್‌ವರ್ಕ್ಸ್ ಬಳಿ ಬುಧವಾರ ಭಾರತೀಯ ಸೇನಾ ಹೆಲಿಕಾಪ್ಟರ್‌ ರಕ್ಷಣಾ ಕಾರ್ಯಾಚರಣೆ ನಡೆಸಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ (CRPF Personnel) ಮತ್ತು ಮೂವರು ನಾಗರಿಕರನ್ನು ರಕ್ಷಿಸಿತು.

ಸವಾಲಿನ ಹವಾಮಾನದ ಹೊರತಾಗಿಯೂ ರಕ್ಷಣಾ ಕಾರ್ಯ ಕೈಗೊಳ್ಳಲು ಬುಧವಾರ ಬೆಳಗ್ಗೆ 6 ಗಂಟೆಗೆ ಹೆಲಿಕಾಪ್ಟರ್‌ಗಳನ್ನು ಕಳುಹಿಸಲಾಯಿತು. ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಎಲ್ಲರನ್ನೂ ಯಶಸ್ವಿಯಾಗಿ ಸ್ಥಳಾಂತರಿಸಿ, ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆತರಲಾಗಿದೆ ಎಂದು ಸೇನೆಯು ತಿಳಿಸಿದೆ. ಇದನ್ನೂ ಓದಿ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮತ್ತೆ ಭೂಕುಸಿತ – ಸಾವಿನ ಸಂಖ್ಯೆ 30ಕ್ಕೆ ಏರಿಕೆ

ಸ್ಥಳಾಂತರಿಸಿದ ಸ್ವಲ್ಪ ಸಮಯದ ನಂತರ ಸಿಬ್ಬಂದಿ ಆಶ್ರಯ ಪಡೆದಿದ್ದ ಕಟ್ಟಡ ಕುಸಿದು ಬಿದ್ದಿದೆ. ಸಮಯೋಚಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಎಲ್ಲರೂ ಬಚಾವ್‌ ಆಗಿದ್ದಾರೆ.

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್, ಉಜ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿವೆ. ಪಠಾಣ್‌ಕೋಟ್, ಹೋಶಿಯಾರ್‌ಪುರ, ಗುರುದಾಸ್ಪುರ್, ಕಪುರ್ತಲಾ, ಫಜಿಲ್ಕಾ, ತರಣ್ ತರಣ್ ಮತ್ತು ಫಿರೋಜ್‌ಪುರ ಸೇರಿದಂತೆ ಪಂಜಾಬ್ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದನ್ನೂ ಓದಿ: ಭಾರತದಲ್ಲಿ 5 ಲಕ್ಷ ಉಚಿತ ChatGPT ಖಾತೆ – OpenAI ಘೋಷಣೆ

ಹೆಚ್ಚುವರಿ ಜಿಲ್ಲಾಧಿಕಾರಿ ಹರ್ದೀಪ್ ಸಿಂಗ್, ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಿಂದಾಗಿ ಪಠಾಣ್‌ಕೋಟ್‌ನಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಪಠಾಣ್‌ಕೋಟ್‌ನಲ್ಲಿರುವ ರಾಧಾ ಸ್ವಾಮಿ ಸತ್ಸಂಗ್ ಬಿಯಾಸ್ ಅನ್ನು ಸ್ಥಳಾಂತರಿಸುವ ಕೇಂದ್ರವೆಂದು ನಾವು ಗುರುತಿಸಿದ್ದೇವೆ. ನಾವು ಜನರನ್ನು ಸ್ಥಳಾಂತರಿಸುತ್ತೇವೆ. ಆಹಾರಕ್ಕಾಗಿ ಸರಿಯಾದ ವ್ಯವಸ್ಥೆಗಳನ್ನು ಸಹ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Share This Article