ಭಾರತದ ಗಡಿಯಲ್ಲಿ ಗುಂಡಿನ ಚಕಮಕಿ – ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಓರ್ವ ಯೋಧ ಹುತಾತ್ಮ

Public TV
2 Min Read

ಶ್ರೀನಗರ: ಜಮ್ಮುವಿನ ಅಖ್ನೂರ್‌ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (LOC) ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ (Indian Army) ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ರಜೌರಿ ಜಿಲ್ಲೆಯ ಅಖ್ನೂರ್‌ನಲ್ಲಿ ಪಾಕ್ ನುಸುಳುಕೋರರನ್ನು ಹಿಮ್ಮೆಟ್ಟಿಸುವ ಪ್ರಯತ್ನದಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (JoC) ಕುಲ್‌ದೀಪ್‌ ಚಂದ್‌ (Kuldeep Chand) ಹುತಾತ್ಮರಾಗಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸಮರ ಸಾರಿದ ಸೇನೆ – ಜೈಶ್ ಕಮಾಂಡೋ ಸೇರಿ ಮೂವರು ಭಯೋತ್ಪಾದಕರ ಹತ್ಯೆ

ಶುಕ್ರವಾರ ತಡರಾತ್ರಿ ಕೇರಿ ಭಟ್ಟಾಲ್‌ನ ಅರಣ್ಯ ಪ್ರದೇಶದ ಹೊಳೆ ಬಳಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪಿನ ಚಲನವಲನ ಗಮನಿಸಿದ್ದಾರೆ. ಕೂಡಲೇ ಎಚ್ಚೆತ್ತ ಸೇನಾ ಪಡೆದ ಅವರನ್ನು ಎದುರಿಸಲು ಮುಂದಾಗಿವೆ. ಈ ವೇಳೆ ಎರಡೂಕಡೆಯಿಂದ ತೀವ್ರ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಕುಲ್‌ದೀಪ್‌ ಚಂದ್‌ ಅವರಿಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಉನ್ನತ ಸೇನಾಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ಉಗ್ರರರು ಅಡಗಿರುವ ಪ್ರದೇಶವನ್ನು ಸುತ್ತುವರಿದಿದೆ.

INDIAN ARMY

ಕಳೆದ ಫೆಬ್ರವರಿ 11ರಂದು ಇದೇ ಪ್ರದೇಶದಲ್ಲಿ ಭಯೋತ್ಪಾದಕರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿ ಇಬ್ಬರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದರು, ಮತ್ತೊಬ್ಬರು ಗಾಯಗೊಂಡಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪ – ಜಮ್ಮು-ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವ

ಕಿಶ್ತ್ವಾರದಲ್ಲಿ ಮೂವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್‌ನಲ್ಲಿ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು (Indian Army) ಹತ್ಯೆಗೈದಿವೆ. ಈ ಪೈಕಿ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಛತ್ರುವಿನ ಕಾಡಿನ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಸಾಧ್ಯತೆಯನ್ನು ಗಮನಿಸಿದ ಸೇನೆ, ಶೋಧ ಕಾರ್ಯಾಚರಣೆಯನ್ನು ಆರಂಭಿಸಿತು. ಈ ವೇಳೆ ಭಯೋತ್ಪಾದಕರೊಂದಿಗೆ ತೀವ್ರ ಗುಂಡಿನ ಚಕಮಕಿಯಾಗಿದ್ದು, ಒಬ್ಬ ಭಯೋತ್ಪಾದಕನನ್ನು ಸೇನೆಯು ಯಶಸ್ವಿಯಾಗಿ ಹೊಡೆದುರುಳಿಸಿದೆ. ಇದನ್ನೂ ಓದಿ: UPI Down | ದೇಶಾದ್ಯಂತ ಯುಪಿಐ ಸೇವೆಗಳಲ್ಲಿ ವ್ಯತ್ಯಯ – ಬ್ಯಾಂಕಿಂಗ್‌ ಸೇವೆಗಳ ಮೇಲೂ ಪರಿಣಾಮ

Share This Article