ಬೆಳಗಾವಿ: ಸ್ವಿಮ್ಮಿಂಗ್ ಮಾಡುವಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ನಾನಾವಾಡಿಯ ಕಮಾಂಡೋ ವಿಂಗ್ ಆವರಣದಲ್ಲಿ ನಡೆದಿದೆ.
ವಿಂಗ್ ಆವರಣದಲ್ಲಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಸ್ವಿಮ್ಮಿಂಗ್ ಮಾಡುವ ವೇಳೆ ಘಟನೆ ನಡೆದಿದ್ದು, ಹರಿಯಾಣ ಮೂಲದ ಲೆಫ್ಟಿನೆಂಟ್ ಅಮಿತ್‌ಸಿಂಗ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ ಎಂಎಲ್ಐಆರ್‌ಸಿ ಕಮಾಂಡೋ ವಿಂಗ್‌ನಲ್ಲಿ ಟ್ರೇನಿಂಗ್‌ನಲ್ಲಿ ಅಧಿಕಾರಿಯಾಗಿದ್ದರು ಎನ್ನಲಾಗಿದೆ.
ಸ್ವಿಮ್ಮಿಂಗ್ ಮಾಡುವಾಗಲೇ ತೀವ್ರ ಹೃದಯಾಘಾತವಾಗಿದೆ. ಅಧಿಕಾರಿಯನ್ನು ಮೇಲಕ್ಕೆ ತಂದು ಲೈಫ್ ಗಾರ್ಡ್ ಪ್ರದೀಪ್ ಕುಮಾರ್ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಬಳಿಕ ಅಂಬುಲೆನ್ಸ್ ಮೂಲಕ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯದಲ್ಲೇ ಲೆಫ್ಟಿನೆಂಟ್ ಅಮಿತ್ ಸಿಂಗ್ ಸಾವನ್ನಪ್ಪಿದ್ದಾರೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

