ಮುರುಘಾ ಶ್ರೀಗಳಿಗೆ ಮತ್ತೆ ಅರೆಸ್ಟ್ ವಾರೆಂಟ್ ಜಾರಿ

Public TV
1 Min Read

ಚಿತ್ರದುರ್ಗ: ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮುರುಘಾಶ್ರೀಗಳಿಗೆ (Murugha Shree) ಮತ್ತೆ ಬಂಧನದ ಭೀತಿ ಎದುರಾಗಿದೆ.

ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ (Arrest Warrant) ಜಾರಿಯಾಗಿದೆ. ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ (Chitradurga) ಜಿಲ್ಲಾ ನ್ಯಾಯಾಲಯ ಆದೇಶ ಮಾಡಿದೆ. ಈ ಮೂಲಕ ಕೇವಲ ನಾಲ್ಕೇ ದಿನಕ್ಕೆ ಶ್ರೀಗಳಿಗೆ ಮತ್ತೆ ಬಂಧನದ ಭೀತಿ ಶುರುವಾಗಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ

ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ; ಭಕ್ತರಿಗೆ ಮೌನವೇ ದೊಡ್ಡ ಸಂದೇಶ: ಜೈಲಿಂದ ಬಂದ ಮುರುಘಾ ಶ್ರೀ

1ನೇ ಪೊಕ್ಸೋ ಕೇಸಲ್ಲಿ ಹೈಕೋರ್ಟ್ ನಿಂದ (HighCourt) ಷರತ್ತುಬದ್ಧ ಜಾಮೀನು ಹಿನ್ನೆಲೆಯಲ್ಲಿ ಮುರುಘಾಶ್ರೀ ಚಿತ್ರದುರ್ಗ ಜಿಲ್ಲೆ ಪ್ರವೇಶಿಸುವಂತಿಲ್ಲ. ಮುರುಘಾಶ್ರೀ ಮತ್ತೆ ಬಂಧನದ ಅಗತ್ಯವಿಲ್ಲ. ಬಂಧನ ವಾರೆಂಟ್ ಹೈಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆಂದು ಮುರುಘಾಶ್ರೀ ಪರ ವಕೀಲ ಉಮೇಶ್ ವಾದಿಸಿದ್ದಾರೆ. ಸದ್ಯ ಎರಡೂ ಕಡೆಯ ವಾದ ಆಲಿಸಿರುವ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ. ಈ ಮೂಲಕ 2ನೇ ಪ್ರಕರಣದಲ್ಲಿ ನಿರ್ಧಾರ ಪ್ರಕಟಿಸಿದೆ.

ಕೇರಳದ ಪ್ರಕರಣವೊಂದರ ಉಲ್ಲೇಖದನ್ವಯ ಅರೆಸ್ಟ್ ವಾರೆಂಟ್ ಜಾರಿ ಮಾಡುವಂತೆ ಕೋರ್ಟ್ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದೆ.

Share This Article