4 ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಕಲಾನಿರ್ದೇಶಕ ದೇಸಾಯಿ ನೇಣಿಗೆ ಶರಣು

Public TV
1 Min Read

ಲಾನಿರ್ದೇಶನಕ್ಕಾಗಿ (Art Director) ಬರೋಬ್ಬರಿ ನಾಲ್ಕು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದ ಬಾಲಿವುಡ್ ನ ಖ್ಯಾತ ಆರ್ಟ್ ಡೈರೆಕ್ಟರ್ ನಿತಿನ್ ದೇಸಾಯಿ (Nitin Desai) ನೇಣಿಗೆ ಶರಣಾಗಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲವಾದರೂ ಆರ್ಥಿಕ ಸಂಕಷ್ಟವೇ ಕಾರಣ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ತನಿಖೆ ನಡೆಯುತ್ತಿದೆ.

ಬಾಲಿವುಡ್ (Bollywood)ನಲ್ಲಿ ಕಲಾ ನಿರ್ದೇಶಕರಾಗಿ, ನಿರ್ದೇಶಕರಾಗಿ, ಪ್ರೊಡಕ್ಷನ್ ಡಿಸೈನರ್ ಆಗಿ ಹೀಗೆ ವಿವಿಧ ವಿಭಾಗಗಳಲ್ಲಿ ದೇಸಾಯಿ ಕೆಲಸ ಮಾಡಿದ್ದರು. ಅಲ್ಲದೇ, ಹಿಂದಿ ಮತ್ತು ಮರಾಠಿ ಕಿರುತೆರೆಯಲ್ಲೂ ಸಾಕಷ್ಟು ಕೆಲಸ ಮಾಡಿದ್ದರು. ಸಂಜಯ್ ಲೀಲಾ ಬನ್ಸಾಲಿ ಸೇರಿದಂತೆ ಖ್ಯಾತ ನಿರ್ದೇಶಕರ ಸಿನಿಮಾಗಳಿಗೆ ಸೆಟ್ ಹಾಕಿದ್ದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ:ದಕ್ಷಿಣದ ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿ

ಆಗಸ್ಟ್ 9‍ಕ್ಕೆ ಅವರು 58ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಅಷ್ಟರಲ್ಲಿ ಇಂಥದ್ದೊಂದು ತಪ್ಪು ನಿರ್ಧಾರವನ್ನು ಅವರು ಕೈಗೊಂಡಿದ್ದಾರೆ ಎನ್ನುತ್ತಾರೆ ದೇಸಾಯಿ ಆಪ್ತರು. ಕಲಾ ನಿರ್ದೇಶನಕ್ಕಾಗಿಯೇ ಅವರು 4 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಇದೀಗ ಮುಂಬೈನ ಕರ್ಜತ್ ಎನ್.ಡಿ ಸ್ಟುಡಿಯೋದಲ್ಲಿ ನೇಣಿಗೆ  (Suicide) ಶರಣಾಗಿದ್ದಾರೆ.

 

ಜೋದಾ ಅಕ್ಬರ್, ಲಗಾನ್, ಹಮ್ ದಿಲ್ ದೆ ಜುಕೆ ಸನಂ ಹೀಗೆ ಸಾಕಷ್ಟು ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದ ನಿತಿನ್, ಬೃಹತ್ ಸೆಟ್ ಗಳಲ್ಲಿ ನಿರ್ಮಾಣ ಮಾಡುವಲ್ಲಿ ದೇಸಾಯಿ ಪಳಗಿದ್ದರು. ಅನೇಕರು ನಿತಿನ್ ಸಾವಿಗೆ ಕಂಬನಿ ಮಿಡಿದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್