ದ್ರೌಪದಿ ವಸ್ತ್ರಾಪಹರಣ ಆದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆ ಮೇಲೆ ದೌರ್ಜನ್ಯ: ಅರವಿಂದ್ ಬೆಲ್ಲದ್

2 Min Read

ಬೆಂಗಳೂರು: ಕೌರವರು ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ಕೌರವ ವಂಶಸ್ಥರಾದ ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲಿ ಹುಬ್ಬಳ್ಳಿಯಲ್ಲಿ (Hubballi) ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್ (Arvind Bellad) ಸಿಎಂ, ಡಿಸಿಎಂ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹುಬ್ಬಳ್ಳಿ ಘಟನೆ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸರ್ಕಾರದಲ್ಲಿ ಮಹಿಳೆಯರು ಮೇಲೆ ಹೀಗೆ ಆದ ಘಟನೆ ನಾಗರಿಕ ಸಮಾಜ ಬೆಚ್ಚಿ ಬೀಳುವ ಪ್ರಕರಣ. ಒಬ್ಬ ಮಹಿಳೆಯನ್ನ ಪೊಲೀಸರು ಸರ್ಕಾರದ ಅಣತಿ ಮೇಲೆ ನಗ್ನ ಮಾಡಿದ್ದಾರೆ. ಇದು ಭಯಾನಕ ಘಟನೆ. ಪೊಲೀಸರೇ ಬಲಾತ್ಕಾರ ಮಾಡಿ ಬಟ್ಟೆ ಕಳಚಿ ಆಕೆಯನ್ನ ಎಳೆದುಕೊಂಡು ಹೋಗಿದ್ದಾರೆ. ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ. ಯಾವ ರೀತಿ ಸರ್ಕಾರ ಇದು. ಇದು ಅಕ್ಷಮ್ಯ ಅಪರಾಧ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಇನ್ಸ್ಟಾದಲ್ಲಿ ಯುವತಿಗೆ ಮೆಸೇಜ್ – ಇದು ಕಾಂಗ್ರೆಸ್ ಐಟಿ ಟೀಂ ಕೆಲಸ ಎಂದ ಬಿಜೆಪಿ ಶಾಸಕ

ಯಾರು ಪೊಲೀಸರು ಹೀಗೆ ಮಾಡಿದ್ರೋ ಆ ಪೊಲೀಸರನ್ನ ವಜಾ ಮಾಡಿ ಅವರಿಗೆ ಗುಂಡು ಹಾರಿಸಬೇಕಿತ್ತು. ಸಿಎಂ ಸಿದ್ದರಾಮಯ್ಯಗೆ ಆಗ್ರಹ ಮಾಡ್ತೀನಿ ದೌರ್ಜನ್ಯ ಮಾಡಿದ ಪೊಲೀಸರು ಮಹಿಳೆಯ ಕಾಲು ಮುಟ್ಟಿ ಕ್ಷಮೆ ಕೇಳಬೇಕು. ಪೊಲೀಸರನ್ನ ವಜಾ ಮಾಡಬೇಕು. ಸಿಎಂ ಅಲ್ಲೇ ಇದ್ದಾರೆ, ಮಹಿಳೆ ಮನೆಗೆ ಹೋಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ: ಅಶೋಕ್

ದ್ರೌಪದಿ ವಸ್ತ್ರಾಪಹರಣ ಮಾಡಿದ ಹಾಗೆ ರಾಜ್ಯದಲ್ಲಿ ಕೌರವ ವಂಶಸ್ಥರಾದ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಸರ್ಕಾರದಲ್ಲಿ ನಗ್ನ ಮಾಡಿದ್ದಾರೆ. ಮಹಿಳೆಯರಿಗೆ ಈ ಸರ್ಕಾರದಲ್ಲಿ ರಕ್ಷಣೆ ಇಲ್ಲ. ಕಾಂಗ್ರೆಸ್ ಕಾರ್ಪೊರೇಟರ್ ಇದ್ದಾರೆ ಅಂತ ಪೋಲೀಸರು ಅನಾಚಾರ, ಅತ್ಯಾಚಾರ ಮಾಡಿದ್ದಾರೆ. ಇದರ ಸಂಪೂರ್ಣ ಹೊಣೆ ಸಿಎಂ ಹೊರಬೇಕು ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಪ್ರಕರಣ; ಪೊಲೀಸರು, ಕಾರ್ಪೊರೇಟರ್ ಮೇಲೆ ಕ್ರಮ ಆಗಬೇಕು – ಸಿ.ಟಿ.ರವಿ

ಮಹಿಳೆಯೇ ಬಟ್ಟೆ ಹರಿದುಕೊಂಡಿದ್ದಾಳೆ ಎಂಬ ಹುಬ್ಬಳ್ಳಿ ಕಮೀಷನರ್ ಹೇಳಿಕೆಗೆ ಕಿಡಿಕಾರಿದ ಅವರು, ಕಮೀಷನರ್‌ಗೆ ನಾಚಿಕೆ ಆಗಬೇಕು. ಕೃತ್ಯ ಮಾಡಿದ ಪೊಲೀಸರನ್ನ ಡಿಫೆಂಡ್ ಮಾಡಿಕೊಳ್ಳೋದು ಸರಿಯಲ್ಲ. ಪೊಲೀಸ್ ಆಯುಕ್ತರ ಮೇಲೂ ಕ್ರಮ ಆಗಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಮಹಿಳೆಯೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್‌ ಇದೆ: ಹು-ಧಾ ಆಯುಕ್ತ ಶಶಿಕುಮಾರ್‌

Share This Article