ದೇವರ ಆಶೀರ್ವಾದ ನನ್ನ ಜೊತೆಗಿದೆ- ಜೈಲಿನಿಂದ ಹೊರ ಬಂದ ಕೇಜ್ರಿವಾಲ್‌ ಫಸ್ಟ್‌ ರಿಯಾಕ್ಷನ್

Public TV
1 Min Read

– ಪತಿಯನ್ನು ಬರಮಾಡಿಕೊಂಡ ಪತ್ನಿ

ನವದೆಹಲಿ: ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಮಾಧ್ಯಮಗಳಿಗೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲ ಬೆಂಬಲಿಗರಿಗೆ ಧನ್ಯವಾದಗಳು. ದೇವರ ಆಶೀರ್ವಾದ ನನ್ನ ಜೊತೆಗಿದೆ. ನಿರಕುಂಶ ಪ್ರಭುತ್ವದ ವಿರುದ್ಧ ನಾವು ಹೋರಾಡಬೇಕು ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ಹನುಮಾನ್ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಕೇಜ್ರಿವಾಲ್‌, ಮಧ್ಯಾಹ್ನ ಒಂದು ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.‌ ಇದನ್ನೂ ಓದಿ: ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು- ಸುಪ್ರೀಂ ವಿಧಿಸಿದ ಷರತ್ತುಗಳೇನು..?

ಸುನಿತಾ ಕೇಜ್ರಿವಾಲ್‌ ಸ್ವಾಗತ: ಪತಿ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಪತ್ನಿ ಸುನಿತಾ ಕೇಜ್ರಿವಾಲ್‌ ಅವರು ಸ್ವಾಗತಿಸಿದರು. ಇದೇ ವೇಳೆ ಆಮ್ ಆದ್ಮಿ ಪಕ್ಷದ (AAP) ಬೆಂಬಲಿಗರು, ಕಾರ್ಯಕರ್ತರು ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ತಿಹಾರ್ ಜೈಲಿನ ಹೊರಗೆ ಹಾಜರಿದ್ದರು.

ಕಳೆದ 50 ದಿನಗಳಿಂದ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದರು. ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಜೂನ್ 1 ರವರೆಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Share This Article