ಕೋವಿಡ್ ಉಲ್ಬಣ – ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್

By
1 Min Read

ಲಕ್ನೋ: ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಗೌತಮ್ ಬುದ್ಧ ನಗರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಎನ್‌ಸಿಆರ್ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

covid

ಈ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದ್ದು, ಹಲವು ನಿರ್ದೇಶನಗಳನ್ನೂ ನೀಡಿದ್ದಾರೆ. ದೆಹಲಿಯಲ್ಲಿ ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದ ಎನ್‌ಸಿಆರ್ ಜಿಲ್ಲೆಗಳ ಮೇಲೂ ಪರಿಣಾಮ ಬೀರಿದೆ. ಈ ನಿಟ್ಟಿನಲ್ಲಿ ಕೋವಿಡ್-19 ಸೋಂಕಿತರ ಮಾದರಿಯನ್ನು ಪರೀಕ್ಷಿಸುವಂತೆ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅಧಿಕಾರಿ ಮೂಲಗಳು ಹೇಳಿವೆ. ಇದನ್ನೂ ಓದಿ: ಪತಿಯೊಂದಿಗೆ ಜಗಳವಾಡಿದ ಕೋಪದಲ್ಲಿ ಮಗುವಿನ ಕತ್ತು ಹಿಸುಕಿ ಕೊಂದ್ಲು

ಗೌತಮ್ ಬುದ್ಧ ನಗರದಲ್ಲಿ 70 ಹಾಗೂ ಗಾಜಿಯಾಬಾದ್ ನಲ್ಲಿ 11 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ 700 ಲಸಿಕಾ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡವುದನ್ನು ತ್ವರಿತಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಸ್ಥಳೀಯ ಉತ್ಪನ್ನ ಮಾತ್ರ ಖರೀದಿಸಲು ಜನರನ್ನು ಪ್ರೇರೇಪಿಸಿ: ಸ್ವಾಮೀಜಿಗಳಿಗೆ ಮೋದಿ ಮನವಿ

corona

ಕೋವಿಡ್ ಪ್ರಕರಣಗಳನ್ನು ಶೀಘ್ರವೇ ಪತ್ತೆಹಚ್ಚಲು ಸೋಂಕಿತರ ಮಾದರಿ ಪರೀಕ್ಷೆಗಳನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿ, ಬೇಗನೇ ವರದಿ ಪಡೆಯಬೇಕು. ಇದರೊಂದಿಗೆ ಬರೇಲಿ ವಿಭಾಗದಲ್ಲಿ ಮಲೇರಿಯಾ, ಆಗ್ರಾ ಮತ್ತು ಲಕ್ನೋ ವಿಭಾಗಗಳಲ್ಲಿ ಡೆಂಗ್ಯೂ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಬೇಕೆಂದು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *