BJP ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ಪಕ್ಷದ ಮೊದಲ ಗುರಿ: ಓವೈಸಿ

Public TV
1 Min Read

ಲಕ್ನೋ: ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ನಮ್ಮ ಪಕ್ಷದ ಮೊದಲ ಗುರಿಯಾಗಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಖಾಸಗಿವಾಹಿನಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಉತ್ತರ ಪ್ರದೇಶದಲ್ಲಿ ಯಾವುದೇ ರಾಜಕೀಯ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಉತ್ತರ ಪ್ರದೇಶದ ಜನರು ನಾವು ಸ್ಪರ್ಧಿಸುವ 100 ಸ್ಥಾನಗಳಲ್ಲಿ ತಮ್ಮ ಪಕ್ಷವನ್ನು ಆಯ್ಕೆ ಮಾಡುತ್ತಾರೆ ಎಂದು ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

 

BJP - CONGRESS

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ನಮ್ಮ ಮೊದಲ ಗುರಿ. ಎರಡನೆಯದಾಗಿ, ಜಾತಿ-ಧರ್ಮದ ನಡುವೆ ತಾರತಮ್ಯ ಮಾಡದ ವ್ಯಕ್ತಿ, ಪಕ್ಷ ನಮಗೆ ಬೇಕು. ಉತ್ತರ ಪ್ರದೇಶದ ಮುಸ್ಲಿಮರ ಸಾಮಾಜಿಕ ಮತ್ತು ಆರ್ಥಿಕ ಸೂಚಕಗಳು ನಿರಾಶಾದಾಯಕವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

Share This Article
Leave a Comment

Leave a Reply

Your email address will not be published. Required fields are marked *