ಚಾಮುಂಡಿಬೆಟ್ಟದಲ್ಲಿ ಆಷಾಢ 2ನೇ ಶುಕ್ರವಾರವೂ ಭಕ್ತರ ದಂಡು – 60 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನ

Public TV
2 Min Read

– ರಾತ್ರಿ 11 ಗಂಟೆವರೆಗೂ ದೇವರ ದರ್ಶನಕ್ಕೆ ಅವಕಾಶ
– ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿ

ಮೈಸೂರು: ಆಷಾಢ ಮಾಸ (Ashadha) ಹಿನ್ನೆಲೆಯಲ್ಲಿ 2ನೇ ಶಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ (Chamundeshwari Temple) ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ನಾಡ ಅದಿದೇವತೆ ಚಾಮುಂಡಿ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ.

ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನ ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನ ದೇವಿಯ ದರ್ಶನ ಪಡೆದರೆ ಸಹಸ್ರ ಪುಣ್ಯದ ಫಲ ದೊರೆಯಲಿದೆ ಎಂಬ ಪ್ರತೀತಿ ಕೂಡ ಇದೆ. ಇದೇ ಕಾರಣದಿಂದ ಸಾವಿರಾರು ಜನರು ಚಾಮುಂಡಿಬೆಟ್ಟಕ್ಕೆ (Chamundi Hills) ಆಗಮಿಸುತ್ತಿದ್ದಾರೆ. ಅಲ್ಲದೇ ಭಕ್ತರು ವಿವಿಧ ಸೇವೆಗಳನ್ನು ಹಾಗೂ ಪೂಜೆಗಳನ್ನು ನೆರವೇರಿಸುತ್ತಿದ್ದಾರೆ. ಹರಕೆ ಹೊತ್ತ ಭಕ್ತರು ಕಾಣಿಗೆ ನೀಡುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಶಕ್ತಿ ಪ್ರದರ್ಶನ – ಜುಲೈ 13, 14ಕ್ಕೆ ಸಭೆ

ತಾಯಿ ಚಾಮುಂಡೇಶ್ವರಿ ಮೂರ್ತಿಯನ್ನು ಸಿಂಹವಾಹಿನಿ ಅಲಂಕಾರದಿಂದ ಕಂಗೊಳಿಸುವಂತೆ ಮಾಡಿದ್ದು, ಬಗೆಬಗೆಯ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಳಗ್ಗಿನ ಜಾವ 5:30ರಿಂದಲೇ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ರುದ್ರಾಭಿಷೇಕ, ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನೇರವೇರುತ್ತಲೇ ಇವೆ. ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್:
2ನೇ ಶುಕ್ರವಾರ ಪಾಸ್ ವ್ಯವಸ್ಥೆಗೆ ಬ್ರೇಕ್ ಹಾಕಲಾಗಿದೆ. ವಿಶೇಷ ದರ್ಶನಕ್ಕೆ 300 ರೂ. ಹಾಗೂ 50 ರೂ. ಟಿಕೆಟ್ ನಿಗದಿಪಡಿಸಲಾಗಿದೆ. 65 ವರ್ಷ ಮೇಲ್ಪಟ್ಟವರಿಗೆ 50 ರೂ. ಟಿಕೆಟ್ ಸಾಲಿನಲ್ಲಿ ನೇರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ 5.30 ರಿಂದ ರಾತ್ರಿ 11 ಗಂಟೆವರೆಗೆ ಭಕ್ತರ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್