ತೆಲುಗು, ತಮಿಳು ಸಿನಿಮಾ ಒಪ್ಪಿಕೊಂಡ ಆಶಿಕಾ ರಂಗನಾಥ್

Public TV
1 Min Read

ಚುಟುಚುಟು ಖ್ಯಾತಿಯ ಹುಡುಗಿ ಆಶಿಕಾ ರಂಗನಾಥ್ (Ashika Ranganath) ಪರಭಾಷಾ ಸಿನಿಮಾಗಳಲ್ಲೂ ಬ್ಯುಸಿ ಆದಂತೆ ಕಾಣುತ್ತಿದೆ. ಈಗಾಗಲೇ ತಮಿಳು (Tamil) ಮತ್ತು ತೆಲುಗಿನಲ್ಲಿ (Telagu) ಆಶಿಕಾ ನಟಿಸಿದ್ದರು. ಸಿದ್ದಾರ್ಥ ಜೊತೆಗಿನ ಚಿತ್ರದ ಶೂಟಿಂಗ್ ಮುಗಿಸಿಕೊಂಡಿದ್ದಾರೆ. ಆ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕು. ಇದಕ್ಕೂ ಮೊದಲು ನಾಗಾರ್ಜುನ ಅಕ್ಕಿನೇನಿಗೆ ಜೋಡಿಯಾಗಿ ‘ನಾ ಸಾಮಿ ರಂಗ’ (Naa Saami Ranga) ಸಿನಿಮಾದಲ್ಲಿ ನಟಿಸಿದ್ದರು.

ಜ.14ರಂದು ‘ನಾ ಸಾಮಿ ರಂಗ’ ಸಿನಿಮಾ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿತ್ತು. ನಾಗಾರ್ಜುನ ಮತ್ತು ಆಶಿಕಾ ಜೋಡಿ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಸಿನಿಮಾ ನೋಡಿ ಅಭಿಮಾನಿಗಳು ಕೂಡ ಮೆಚ್ಚಿಕೊಂಡಿದ್ದರು. ಡ್ಯಾನ್ಸ್ ಮಾಸ್ಟರ್ ವಿಜಯ್ ಬಿನ್ನಿ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಗ್ರಾಮೀಣ ಸೊಗಡಿನ ಕಥೆಯನ್ನು ಈ ಚಿತ್ರದ ಮೂಲಕ ತೋರಿಸಿದ್ದರು. ನಾಗಾರ್ಜುನ ಅವರನ್ನು ಡಿಫರೆಂಟ್ ಆಗಿ ಅಭಿಮಾನಿಗಳಿಗೆ ತೋರಿಸುವ ಮೂಲಕ ಸದ್ದು ಮಾಡಿದ್ದರು. ಆಶಿಕಾ ಕೂಡ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದರು.

ಈ ಸಿನಿಮಾ ಗೆಲುವು ಸಾಧಿಸುತ್ತಿರುವಂತೆ ಮತ್ತೆ ತಮಿಳು ಹಾಗೂ ತೆಲುಗು ಚಿತ್ರರಂಗಗಳಿಂದ ಆಶಿಕಾಗೆ ಅವಕಾಶ ಹುಡುಕಿ ಬಂದಿದೆ. ಅವರೇ ಹೇಳುವಂತೆ ತೆಲುಗಿನಲ್ಲೊ ಒಂದು ಹಾಗೂ ತಮಿಳಿನಲ್ಲಿ ಒಂದು ಚಿತ್ರವನ್ನು ಒಪ್ಪಿಕೊಂಡಿದ್ದಾರಂತೆ. ಎರಡೂ ಚಿತ್ರಗಳು ಶೂಟಿಂಗ್ ಶುರುವಾಗಬೇಕು.

 

ಪುನೀತ್ ರಾಜ್ ಕುಮಾರ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ 02 ಚಿತ್ರದಲ್ಲೂ ಆಶಿಕಾ ನಟಿಸಿದ್ದಾರೆ. ಮೊದಲ ಬಾರಿಗೆ ಡಾಕ್ಟರ್ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಆಶಿಕಾ ಜೊತೆ ಮುಖ್ಯಭೂಮಿಕೆಯಲ್ಲಿ ಮಲೆನಾಡಿನ ಪ್ರತಿಭೆ ಪ್ರವೀಣ್ ತೇಜ್ ನಟಿಸಿದ್ದಾರೆ.

Share This Article