ಭಾರತದ ಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಅಶ್ವಥ್‌ ನಾರಾಯಣ ಚಾಲನೆ

Public TV
2 Min Read

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಸೆಲ್‌ಲಿಂಕ್‌ ಕಂಪನಿಗಳ ಸಹಯೋಗದಲ್ಲಿ ಐಐಎಸ್ಸಿಯಲ್ಲಿ ಸ್ಥಾಪಿಸಿರುವ ಭಾರತದ ಪ್ರಪ್ರಥಮ 3ಡಿ ಬಯೋಪ್ರಿಂಟಿಂಗ್‌ ಉತ್ಕೃಷ್ಟತಾ ಕೇಂದ್ರವನ್ನು (Bioprinting Center of Excellence) ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ (C.N.Ashwath Narayan) ಅವರು ಶುಕ್ರವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯಕೀಯ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಈಗ ಅಂಗಾಂಶಗಳು ಮತ್ತು ಜೀವಕೋಶಗಳನ್ನು ಆಧರಿಸಿದ ಚಿಕಿತ್ಸೆಗಳು ಮುಂಚೂಣಿಗೆ ಬರುತ್ತಿದ್ದು, ಇವು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿವೆ. ಮುಂಬರುವ ವರ್ಷಗಳಲ್ಲಿ ಆಯಾ ವ್ಯಕ್ತಿಗಳ ಶರೀರ ಸ್ವಭಾವವನ್ನು ಆಧರಿಸಿ, ರೋಗಗಳನ್ನು ಗುಣಪಡಿಸುವಂತಹ ನಿರ್ದಿಷ್ಟ ಬಗೆಯ ಚಿಕಿತ್ಸಾ ಕ್ರಮಗಳು ಜನಪ್ರಿಯವಾಗಲಿದೆ. ಇದರಲ್ಲಿ 3ಡಿ ಬಯೋಪ್ರಿಂಟಿಂಗ್‌ ಮಹತ್ತರ ಪಾತ್ರ ವಹಿಸಲಿದೆ ಎಂದರು. ಇದನ್ನೂ ಓದಿ: ಗುಜರಾತ್‌ ರಿಸಲ್ಟ್‌ ಬೆನ್ನಲ್ಲೇ ಬೊಮ್ಮಾಯಿಯನ್ನು ಭೇಟಿಯಾದ ಆರ್‌ಎಸ್‌ಎಸ್‌ ಮುಖಂಡ ಮುಕುಂದ್‌

ಈ ಉತ್ಕೃಷ್ಟತಾ ಕೇಂದ್ರವು ಆಧುನಿಕ ಚಿಕಿತ್ಸಾ ಕ್ರಮಗಳಿಗೆ ಸಂಬಂಧಿಸಿದ ಸಂಶೋಧನಾ ಉಪಕ್ರಮಗಳನ್ನು ಪರಿಚಯಿಸಲಿದೆ. ಜತೆಗೆ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿರುವ ವೃತ್ತಿಪರರು ಹಾಗೂ ಉಳಿದವರಿಗೆ ವೈಜ್ಞಾನಿಕ ತರಬೇತಿ ಇಲ್ಲಿ ಸಿಗಲಿದೆ. 3ಡಿ ಬಯೋಪ್ರಿಂಟಿಂಗ್‌ ತಂತ್ರಜ್ಞಾನದ ಬಳಕೆಯನ್ನು ಪ್ರಚುರಪಡಿಸಲು ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಅಗತ್ಯವಿರುವ ಉಳಿದೆಡೆಗಳಲ್ಲಿ ಕಾರ್ಯಾಗಾರಗಳನ್ನು ಕೂಡ ಈ ಕೇಂದ್ರವು ಹಮ್ಮಿಕೊಳ್ಳಲಿದೆ ಎಂದು ಅವರು ತಿಳಿಸಿದರು.

ಜೈವಿಕ ತಂತ್ರಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿಗಳ ರಾಜಧಾನಿಯಾಗಿ ಬೆಂಗಳೂರು ಪ್ರತಿಷ್ಠಾಪಿತವಾಗಿದೆ. ಈ ಉತ್ಕೃಷ್ಟತಾ ಕೇಂದ್ರದಲ್ಲಿ ಟಿಶ್ಯೂ ಎಂಜಿನಿಯರಿಂಗ್‌, ಔಷಧಗಳ ಆವಿಷ್ಕಾರ, ಮೆಟೀರಿಯಲ್‌ ಸೈನ್ಸ್‌ನ ಬೆಳವಣಿಗೆ ಸುಗಮವಾಗಿ ನಡೆಯಲಿದೆ. ಇದರಿಂದಾಗಿ ದೇಶದ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗಲಿವೆ. ಇದರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯ ಬಯೋಸಿಸ್ಟಮ್ಸ್ ಸೈನ್ಸ್ ಅಂಡ್‌ ಎಂಜಿನಿಯರಿಂಗ್‌ ಕೇಂದ್ರವು ಸಕ್ರಿಯ ಪಾತ್ರ ವಹಿಸಲಿದೆ ಎಂದು ಸಚಿವರು ನುಡಿದರು. ಇದನ್ನೂ ಓದಿ: ಜನರಿಗೆ ಬೆದರಿಕೆ ಹಾಕಿದ ಏರಿಯಾದಲ್ಲೇ ರೌಡಿಗೆ ಕೋಳ ತೊಡಿಸಿ ಮೆರವಣಿಗೆ

ಕಾರ್ಯಕ್ರಮದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್‌, ಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಸಂಶೋಧನಾ ವಿಭಾಗದ ಮುಖ್ಯಸ್ಥ ಡಾ.ವಿಶಾಲ್‌ ರಾವ್‌, ಸೆಲ್‌ಲಿಂಕ್‌ ಕಂಪನಿಯ ಏಷ್ಯಾ-ಪೆಸಿಫಿಕ್‌ ಮುಖ್ಯಸ್ಥೆ ಟೊಮೋಕೊ ಬೈಲುಂಡ್‌, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರೂಪಕ್‌ ಪೊದ್ದಾರ್‍‌ ಉಪಸ್ಥಿತರಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *