ಚಾಮುಂಡಿ ತಾಯಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜಕುಮಾರ್

By
1 Min Read

ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಇಂದು ಮೈಸೂರಿನ (Mysore) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿ ಆಶೀರ್ವಾದ ಪಡೆದರು. ‘ಆಚಾರ್ & ಕೋ’ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಅವರು ದೇವಿಯ ಪೂಜೆ ಸಲ್ಲಿಸಿ, ಸಿನಿಮಾ ಗೆಲ್ಲುವಂತೆ ಪ್ರಾರ್ಥಿಸಿದರು.

ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆಗೆ ‘ಆಚಾರ್ & ಕೋ’ ಚಿತ್ರತಂಡದವರರು ಕೂಡ ಚಾಮುಂಡಿ  (Chamundeshwari) ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದರು. ಆಚಾರ್ & ಕೋ ಅಶ್ವಿನಿ ಪುನೀತ್ ರಾಜಕುಮಾರ್ ನಿರ್ಮಾಣದ ಚಿತ್ರ. ಈ ಚಿತ್ರ ನಾಳೆ ಬಿಡುಗಡೆ ಆಗಲಿದ್ದು ಈ ಹಿನ್ನಲೆಯಲ್ಲಿ ಚಾಮುಂಡಿ ದೇವಿಯ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ನಟ ವಿನಯ್ ರಾಜಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ ಕುಮಾರ್ ಪುತ್ರಿ ಕೂಡ ಜೊತೆ ಇದ್ದರು. ಪುನೀತ್ ನಿಧನಾ ನಂತರ ಪಿ.ಆರ್.ಕೆ ಪ್ರೊಡಕ್ಷನ್ ಸಂಸ್ಥೆಯ ಪೂರ್ಣ ಪ್ರಮಾಣದ ಜವಾಬ್ದಾರಿಯನ್ನು ತೆಗೆದುಕೊಂಡಿರುವ ಅಶ್ವಿನಿ, ಸಿನಿಮಾಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಇಡೀ ಟೀಮ್ ಜೊತೆ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆ ಪ್ರಿಮಿಯರ್ ಶೋ ಆಯೋಜಿಸಿ, ಸಿನಿಮಾ ಪ್ರಚಾರ ಕೂಡ ಮಾಡುತ್ತಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್