ಸ್ಪಂದನಾ ಅಂತಿಮ ದರ್ಶನ: ಗಳಗಳನೆ ಅತ್ತ ಅಶ್ವಿನಿ ಪುನೀತ್‌ರಾಜ್‌ಕುಮಾರ್

By
1 Min Read

ಸ್ಪಂದನಾ (Spandana) ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸ್ಪಂದನಾ ಮೃತದೇಹ ನೋಡ್ತಿದಂತೆ ಅಪ್ಪು ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್ (Ashwini Puneeth Rajkumar) ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಪ್ಪು ಪತ್ನಿ ಮತ್ತು ಪುತ್ರಿಯರು ಸ್ಪಂದನಾ ನಿಧನಕ್ಕೆ ಕಣ್ಣೀರಿಟ್ಟಿದ್ದಾರೆ.

ವಿಜಯ ರಾಘವೇಂದ್ರ (Vijay Raghavendra) ಪತ್ನಿ ಸ್ಪಂದನಾ ನಿಧನ ಕುಟುಂಬಕ್ಕೆ ಶಾಕ್ ಕೊಟ್ಟಿದೆ. ಸ್ಪಂದನಾ ಅಂತಿಮ ದರ್ಶನದಲ್ಲಿ ಪುನೀತ್ ಪತ್ನಿ, ವಿನಯ್, ಯುವರಾಜ್‌ಕುಮಾರ್, ಪುನೀತ್ ಮಕ್ಕಳಾದ ದೃತಿ ಮತ್ತು ವಂದನಾ ಭಾಗಿಯಾಗಿದ್ದಾರೆ. ಬಿಕ್ಕಿ ಬಿಕ್ಕಿ ಅಳ್ತಿರೋ ಅಶ್ವಿನಿ ಮತ್ತು ಅಪ್ಪು ಮಕ್ಕಳಿಗೆ ಶ್ರೀಮುರಳಿ ಸಂತೈಸಿದ್ದಾರೆ. ಇದನ್ನೂ ಓದಿ:ಕಣ್ಣೀರ ಕಡಲಲ್ಲಿ ವಿಜಯ ರಾಘವೇಂದ್ರ- ಅಣ್ಣನನ್ನು ತಬ್ಬಿ ಸಂತೈಸಿದ ಶ್ರೀಮುರಳಿ

ಸದ್ಯ ಮಲ್ಲೇಶ್ವರಂನಲ್ಲಿರುವ ಅವರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆದು, ವಿಜಯ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಹರಿಶ್ಚಂದ್ರಘಾಟ್‌ನಲ್ಲಿ ಮಧ್ಯಾಹ್ನ 2 ಗಂಟೆಗೆ ಬರ್ನಿಂಗ್‌ಗೆ ಸ್ಲಾಟ್ ಬುಕ್ಕಿಂಗ್ ಮಾಡಲಾಗಿದೆ. ಈಡಿಗ ಸಮುದಾಯದ ಸಂಪ್ರದಾಯದಂತೆ ಪೂಜೆ ಪುನಸ್ಕಾರ ನಡೆಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಗೆ ಪೂಜೆ ಪುನಸ್ಕಾರ ಹಿನ್ನೆಲೆ ಬಿಬಿಎಂಪಿಯಿಂದ ಕೂಡ ಸ್ವಚ್ಛತಾ ಕಾರ್ಯ ಮಾಡಲಾಗಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್