‘ಆರಾಮ್ ಅರವಿಂದ್ ಸ್ವಾಮಿ’ಯ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ

Public TV
1 Min Read

ನಟ ಅನೀಶ್ ತೇಜೇಶ್ವರ್ (Anish Tejeshwar) ನಿರ್ದೇಶಕ ಅಭಿಷೇಕ್ ಶೆಟ್ಟಿ (Abhishek Shetty) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಚಿತ್ರದ ಫಸ್ಟ್ ಲುಕ್ (First Look) ಪೋಸ್ಟರ್ ಬಿಡುಗಡೆಯಾಗಿದೆ. ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini PuneethRajkumar) ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭ ಹಾರೈಸಿ ಸಾಥ್ ನೀಡಿದ್ದಾರೆ.

‘ನಮ್ ಗಣಿ ಬಿಕಾಂ ಪಾಸ್, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದ ಸಿನಿಮಾವಿದು. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು, ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ಅನೀಶ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಚಿತ್ರದ ಫಸ್ಟ್  ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ. ಇದನ್ನೂ ಓದಿ: Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರ್ತಿದ್ದು, ‘ಅಕಿರ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಎರಡು ಶೆಡ್ಯೂಲ್ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮೂರನೇ ಶೆಡ್ಯೂಲ್ ಕೇರಳದಲ್ಲಿ ಸೆರೆ ಹಿಡಿಯಲು ಪ್ಲ್ಯಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಸಾಗರ್ ಛಾಯಾಗ್ರಹಣ, ಉಮೇಶ್ ಸಂಕಲನವಿದೆ.

Share This Article
Leave a Comment

Leave a Reply

Your email address will not be published. Required fields are marked *