ಬಳ್ಳಾರಿ: ರಾಜಸ್ಥಾನದ (Rajastan) ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ (ASI) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ.17ರಂದು ಕರ್ತವ್ಯದ ಮೇಲೆ ಹೊಸಪೇಟೆಯಿಂದ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ
ಹೊಸಪೇಟೆಯ ಗ್ರಾಮೀಣ ಠಾಣೆಯ ಎಎಸ್‌ಐ ಹಾಲಪ್ಪ ಅವರು ಸೇರಿದಂತೆ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ ತೆರಳಿದ್ದರು. ಕರ್ತವ್ಯದಲ್ಲಿದ್ದ ವೇಳೆಯೇ ಹಾಲಪ್ಪ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Exclusive ಸುಜಾತ ಭಟ್ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್
ಮೃತ ಎಎಸ್‌ಐ ಹಾಲಪ್ಪ ಅವರು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದವರಾಗಿದ್ದರು. ನಾಳೆ ಸ್ವಗ್ರಾಮ ಹಿರೇಹಡಗಲಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.