Asia Cup 2023ː ಇಂಡೋ-ಪಾಕ್‌ ಹೈವೋಲ್ಟೇಜ್‌ ಕದನಕ್ಕೆ ಮತ್ತೆ ಮಳೆ ಅಡ್ಡಿ – ಸೋಮವಾರಕ್ಕೆ ಮುಂದೂಡಿಕೆ

By
2 Min Read

ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಜಿದ್ದಾಜಿದ್ದಿನ ಏಷ್ಯಾಕಪ್ ಸೂಪರ್-4 (Asia Cup Super Four) ಇಂಡೋ ಪಾಕ್‌ ಕನದಕ್ಕೆ ಮಳೆ ಅಡ್ಡಿಯಾಗಿದ್ದು ಸೋಮವಾರ ಪಂದ್ಯ ನಡೆಯಲಿದೆ.

ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಆಯ್ದುಕೊಂಡ ಪಾಕಿಸ್ತಾನ (Pakistan), ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ (Team India) ಬಿಟ್ಟುಕೊಟ್ಟಿತು. ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ಶುಭಮನ್ ಗಿಲ್ ಪಾಕ್‌ ಬೌಲರ್‌ಗಳನ್ನ ಹಿಗ್ಗಾಮುಗ್ಗ ಚೆಂಡಾಡಿ ಉತ್ತಮ ರನ್‌ ಕಲೆಹಾಕಿದರು. ಇದನ್ನೂ  ಓದಿ: KL ರಾಹುಲ್‌ ಈಸ್‌ ಬ್ಯಾಕ್‌ – ‌ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಕನ್ನಡಿಗನ ವಿಶೇಷ ಸಾಧನೆ

ಮೊದಲ ವಿಕೆಟ್‌ಗೆ ರೋಹಿತ್‌ ಮತ್ತು ಗಿಲ್‌ ಜೋಡಿ 16.4 ಓವರ್‌ಗಳಲ್ಲಿ 121 ರನ್‌ ಬಾರಿಸಿತ್ತು. ರೋಹಿತ್‌ ಶರ್ಮಾ 49 ಎಸೆತಗಳಲ್ಲಿ 56 ರನ್‌ (6 ಬೌಂಡರಿ, 4 ಸಿಕ್ಸರ್‌) ಚಚ್ಚಿ ಔಟಾಗುತ್ತಿದ್ದಂತೆ, 52 ಎಸೆತಗಳಲ್ಲಿ 10 ಬೌಂಡರಿಗಳೊಂದಿಗೆ 58 ರನ್‌ ಗಳಿಸಿದ್ದ ಶುಭಮನ್‌ ಗಿಲ್‌ ಸಹ ವಿಕೆಟ್‌ ಕೈಚೆಲ್ಲಿದರು. ಇದನ್ನೂ  ಓದಿ: ಭಾರತ ಪಾಕ್ ಪಂದ್ಯಕ್ಕೆ ವರುಣನ ಅಡ್ಡಗಾಲು: ಮ್ಯಾಚ್ ರದ್ದಾದರೆ ಗತಿ ಏನು?

ಆ ನಂತರ ಕಣಕ್ಕಿಳಿದ ಕೆ.ಎಲ್‌ ರಾಹುಲ್‌ (KL Rahul) ಹಾಗೂ ವಿರಾಟ್‌ ಕೊಹ್ಲಿ ಸಹ ಉತ್ತಮ ಪ್ರದರ್ಶನ ನೀಡುವ ಭರವಸೆ ಮೂಡಿಸಿದ್ದರು. 24.1 ಓವರ್‌ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತ್ತು. ಈ ವೇಳೆ ಭಾರೀ ಮಳೆ ಸುರಿದಿದೆ. ವಿರಾಟ್ ಕೊಹ್ಲಿ 8 ರನ್ ಮತ್ತು ಕೆ.ಎಲ್ ರಾಹುಲ್ 17 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಭಾರೀ ಮಳೆಯಿಂದ ಪಂದ್ಯವನ್ನು ರದ್ದು ಮಾಡಿದ್ದು, ಎಲ್ಲಿ ಆಟ ನಿಂತಿದೆಯೋ ಅಲ್ಲಿಂದಲೇ ಪಂದ್ಯ ನಡೆಯಲಿದೆ.

ಕಳೆದ ವಾರ ಗ್ರೂಪ್‌ ಹಂತದಲ್ಲು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿ ಕೋಟ್ಯಂತರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್