AsiaCup 2023: ಪಾಕಿಸ್ತಾನಕ್ಕೆ ಬರುವಂತೆ ಜಯ್‌ಶಾಗೆ ಆಹ್ವಾನ ಕೊಟ್ಟ PCB

Public TV
2 Min Read

ಇಸ್ಲಾಮಾಬಾದ್‌: ಇದೇ ಆಗಸ್ಟ್‌ 30 ರಿಂದ ಪ್ರತಿಷ್ಟಿತ ಏಕದಿನ ಏಷ್ಯಾಕಪ್‌ (AsiaCup 2023) ಟೂರ್ನಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯಕ್ಕೆ ಪಾಕಿಸ್ತಾನಕ್ಕೆ ಬರುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರಿಗೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಆಹ್ವಾನ ನೀಡಿದೆ.

ಆಗಸ್ಟ್‌ 30 ರಿಂದ ಸೆಪ್ಟೆಂಬರ್‌ 17ರ ವರೆಗೆ ಏಕದಿನ ಏಷ್ಯಾಕಪ್‌ ಟೂರ್ನಿ ನಡೆಯಲಿದ್ದು, ಪಾಕಿಸ್ತಾನದ ಮುಲ್ತಾನ್‌ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ನೇಪಾಳ ನಡುವೆ ಆರಂಭಿಕ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯಕ್ಕೆ ಜಯ್‌ ಶಾ (Jay Shah) ಜೊತೆಗೆ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನ (ACC) ಭಾಗವಾಗಿರುವ ಇತರ ಮಂಡಳಿಗಳ ಮುಖ್ಯಸ್ಥರನ್ನೂ ಆರಂಭಿಕ ಪಂದ್ಯಕ್ಕೆ ಆಹ್ವಾನಿಸಲಾಗಿದೆ ಎಂದು ಪಿಸಿಬಿ ತಿಳಿಸಿದೆ. ಇದನ್ನೂ ಓದಿ: AsiaCup 2023: ಟೀಂ ಇಂಡಿಯಾದಿಂದ ಸಂಜು ಸ್ಯಾಮ್ಸನ್‌ ಔಟ್‌?

ಕೆಲ ದಿನಗಳ ಹಿಂದೆ ಐಸಿಸಿ ಸಭೆಗಾಗಿ ಡರ್ಬನ್‌ನಲ್ಲಿ ಭೇಟಿಯಾಗಿದ್ದಾಗ ಅಧ್ಯಕ್ಷ ಝಾಕಾ ಅಶ್ರಫ್, ಜಯ್ ಶಾ ಅವರಿಗೆ ಮೌಖಿಕವಾಗಿ ನೀಡಿದ್ದ ಮೌಖಿಕಿ ಆಹ್ವಾನವನ್ನು ಅವರು ಒಪ್ಪಿದ್ದರು. ಖಂಡಿತವಾಗಿಯೂ ಜಯ್‌ ಶಾ ಪಾಕಿಸ್ತಾನಕ್ಕೆ ಬರುತ್ತಾರೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

ಅಲ್ಲದೇ, ಭಾರತ ಮತ್ತು ಪಾಕಿಸ್ತಾನದ ನಡುವೆ ಅಸ್ತಿತ್ವದಲ್ಲಿರುವ ಸಂಬಂಧಗಳ ಬಗ್ಗೆ ತಿಳಿದಿರುವ ಪಿಸಿಬಿ, ಜಯ್‌ ಶಾ ಅವರಿಗೆ ಆಹ್ವಾನ ನೀಡುವ ಮೂಲಕ ಕ್ರೀಡೆಯೊಂದಿಗೆ ರಾಜಕೀಯ ಬೆರೆಸುವುದಿಲ್ಲ ಎಂಬುದನ್ನ ತೋರಿಸಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಮೊದಲ ಓವರ್‌ನಲ್ಲೇ 2 ವಿಕೆಟ್‌ ಉಡೀಸ್‌ – 11 ತಿಂಗಳ ಬಳಿಕ ಎಂಟ್ರಿ ಕೊಟ್ಟು ​ಭಾರತಕ್ಕೆ ಜಯ ತಂದ ಬುಮ್ರಾ

ಭಾರತ ಏಕೆ ಪಾಕ್‌ಗೆ ಹೋಗ್ತಿಲ್ಲ?
ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ (ICC) ಟೂರ್ನಿ ಅಥವಾ ಏಷ್ಯಾ ಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಟಿ20 ಏಷ್ಯಾಕಪ್‌ ಹಾಗೂ ಟಿ20 ವಿಶ್ವಕಪ್‌ನಲ್ಲಿ ಇತ್ತಂಡಗಳು ಭಾಗಿಯಾಗಿದ್ದವು. ನಂತರ ಏಷ್ಯಾಕಪ್‌ ಆಡಲು ಭಾರತ ತಂಡವನ್ನು ತನ್ನ ದೇಶಕ್ಕೆ ಕಳುಹಿಸಿಕೊಡುವಂತೆ ಪಾಕಿಸ್ತಾನ ಮನವಿ ಮಾಡಿತ್ತು. ಆದರೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಈ ಮನವಿಯನ್ನು ನಿರಾಕರಿಸಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್